ಸಾರೋಟಿನಲ್ಲಿ ಪತ್ರಕರ್ತ ಸಾರಥಿಗಳು

ದಾವಣಗೆರೆ: ನಗರದ ಜಯದೇವ ವೃತ್ತದಿಂದ ಪ್ರಾರಂಭಗೊಂಡ ಪತ್ರಕರ್ತರ ಸಮ್ಮೇಳನದ ಮೆರವಣಿಗೆ ವೈಭವದಿಂದ ನಗರದ ರಾಜ ಬೀದಿಗಳಲ್ಲಿ ಸಾಗಿತು.
ಮೆರವಣಿಗೆ ಜೊತೆಗೆ ಸಾರೋಟಿನಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಇ. ಎಂ. ಮಂಜುನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ದಾವಣಗೆರೆ ಜಿಲ್ಲೆ ವರದಿಗಾರರ ಕೂಟದ ಅಧ್ಯಕ್ಷರಾದ ಕೆ. ಏಕಾಂತಪ್ಪ ಅವರುಗಳನ್ನು ಬೆಳ್ಳಿ ರಥದಲ್ಲಿ ಗೌರವ ಪೂರಕವಾಗಿ ಅದ್ದೂರಿಯಿಂದ ಕಾರ್ಯಕ್ರಮ ನಡೆಯುವ ಸ್ಥಳವಾದ ಪಾರ್ವತಮ್ಮ ಶಿವಶಂಕರಪ್ಪ ಕಲ್ಯಾಣ ಮಂಟಪದ ಆವರಣಕ್ಕೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.
ಮೆರವಣಿಗೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಹಿರಿಯ ಮತ್ತು ಕಿರಿಯ ಜಿಲ್ಲೆ ಅಷ್ಟೇ ಅಲ್ಲದೆ ರಾಜ್ಯದ ಪತ್ರಕರ್ತ ಮಿತ್ರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!