ಮಾಯಕೊಂಡ ಕ್ಷೇತ್ರಕ್ಕೆ ಜೆಡಿಎಸ್ನಿಂದ ಸವಿತಾಬಾಯಿ ಮಲ್ಲೇಶ್ ನಾಯ್ಕ ಸ್ಪರ್ಧೆ ?
ದಾವಣಗೆರೆ: ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿಯೇ ಮಾಯಕೊಂಡ ಕ್ಷೇತ್ರಕ್ಕೆ ಟಿಕೆಟ್ ಘೋಷಣೆಯಾಗಿದ್ದು, ಪ್ರಭಲ ಆಕಾಂಕ್ಷಿಯಾಗಿದ್ದ ಸವಿತಾಬಾಯಿ ಮಲ್ಲೇಶ್ ನಾಯ್ಕ ಅವರಿಗೆ ತೀವ್ರ ನಿರಾಸೆಯಾಗಿದೆ.
ಪ್ರಭಲ ಆಕಾಂಕ್ಷಿಗಳಿಂದ ಭಿನ್ನಮತ ಮುಂದುವರೆದಿದ್ದು, ಟಿಕೆಟ್ ಕೈ ತಪ್ಪಿದ್ದಕ್ಕೆ ಸವಿತಾ ಬಾಯಿ ಮಲ್ಲೇಶ್ ನಾಯ್ಕ್ ಪಕ್ಷೇತರವಾದರೂ ಸರಿ ಸ್ಫರ್ಧೆ ಖಚಿತ ಎಂದು ತಿಳಿಸಿದ್ದರು.
ಇದೀಗ ಸವಿತಾಬಾಯಿ ಜೆಿಡಿಎಸ್ ಸೇರಿದ್ದಾರೆ ಎನ್ನಲಾಗಿದೆ. ಜೆಡಿಎಸ್ ಪಕ್ಷದಿಂದ ಟಿಕೆಟ್ ಪಡೆದು ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್. ಬಸವರಾಜ್ ಅವರಿಗೆ ಸೆಡ್ಡು ಹೊಡಿದ್ದಾರೆ.
ಇತ್ತೀಚೆಗಷ್ಟೇ ಮಾಧ್ಯಮದವರಿಗೆ ಹೇಳಿಕೆ ನೀಡಿದ್ದ ಸವಿತಾಬಾಯಿ ಮಲ್ಲೇಶ್ ನಾಯ್ಕ, ಕಾಂಗ್ರೆಸ್ನ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು ನನ್ನ ಸಂಪರ್ಕದಲ್ಲಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಹೀಗಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದೇನೆ. ಬೇರೆ ಪಕ್ಷಗಳಿಂದಲೂ ಆಫರ್ ಬರುತ್ತಿದೆ. ಆದರೆ ಈ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಾಯಕೊಂಡ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಹೇಳಿದ್ದರು.