ಕಾರ್ಮಿಕರ ಕಷ್ಟಗಳ ಬಗ್ಗೆ ಸವಿತಾಬಾಯಿ ಚರ್ಚೆ..!

ಮಾಯಕೊಂಡ : ಮಾಯಕೊಂಡ ವಿಧಾನ ಸಭಾ ಕ್ಷೇತ್ರದ ಕಾರಿಗನೂರಿನಲ್ಲಿ ಕಾರ್ಮಿಕರಿಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘದ ಪದಾಧಿಕಾರಿಗಳಿಗೆ ಶನಿವಾರ ಸಂಜೆ ಆದೇಶಪತ್ರ ವಿತರಿಸಿದರು.
ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಿಗೆ ಆದೇಶಪತ್ರ ವಿತರಣಾ ಕಾರ್ಯಕ್ರಮಕ್ಕೆ ಭೇಟಿ ನೀಡಿ ಪದಾಧಿಕಾರಿಗಳೊಂದಿಗೆ ಆಗು-ಹೋಗುಗಳ ಬಗ್ಗೆ ಚರ್ಚಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮಾಯಕೊಂಡ ಕ್ಷೇತ್ರ ಅತಿ ಹಿಂದುಳಿದ ಜಿಲ್ಲೆಯಾಗಿದ್ದು, ಅದರ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.
ಮಾಯಕೊಂಡ ವಿಧಾನ ಸಭಾ ಕ್ಷೇತ್ರದ ಕಾರಿಗನೂರಿನಲ್ಲಿ ಕಾರ್ಮಿಕರಿಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸವಿತಾಬಾಯಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘದ ಪದಾಧಿಕಾರಿಗಳೊಂದಿಗೆ ಕಂಡಿದ್ದು ಹೀಗೆ.