‘ಸಾವಿತ್ರಿಬಾಯಿ ಫುಲೆ’ ಏಕವ್ಯಕ್ತಿ ನಾಟಕ ಸಂಜೆ 6.15 ಕ್ಕೆ ಕುವೆಂಪು ಕನ್ನಡ ಭವನದಲ್ಲಿ ಪ್ರದರ್ಶನ
ದಾವಣಗೆರೆ: ‘ಪ್ರಜಾವಾಣಿ’ ಪತ್ರಿಕೆಯ ಅಮೃತ ಮಹೋತ್ಸವ ಆಚರಣೆ ಹಾಗೂ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಅಂಗವಾಗಿ ರಂಗಬಳಗ ದಾವಣಗೆರೆ ಅರ್ಪಿಸುವ ‘ಸಾವಿತ್ರಿಬಾಯಿ ಫುಲೆ’ ಏಕವ್ಯಕ್ತಿ ನಾಟಕ ಜ.3ರಂದು ಸಂಜೆ 6.15ಕ್ಕೆ ಇಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಪ್ರದರ್ಶನಗೊಳ್ಳಲಿದೆ.
ಮಂಜುನಾಥ ಎಲ್. ಬಡಿಗೇರ ನಿರ್ದೇಶಿಸಿದ್ದಾರೆ. ಹೆಗ್ಗೋಡು ಕೆ.ವಿ. ಸುಬ್ಬಣ್ಣ ರಂಗ ಸಮೂಹ ಮತ್ತು ನಾಡ ಚಾವಡಿ ತಂಡವು ಪ್ರಸ್ತುತಿಪಡಿಸುತ್ತಿದೆ. ಎ.ಎಸ್. ಶೈಲಜಾ ಪ್ರಕಾಶ್ ಏಕವ್ಯಕ್ತಿ ನಾಟಕ ಪ್ರದರ್ಶಿಸಲಿದ್ದಾರೆ.
ನಾಟಕ ಪ್ರದರ್ಶನಕ್ಕೆ ಮೊದಲು ಸಭಾ ಕಾರ್ಯಕ್ರಮ ನಡೆಯಲಿದ್ದು, ರಂಗತಜ್ಞ ಎಂ.ಜಿ. ಈಶ್ವರಪ್ಪ ಅತಿಥಿಗಳಾಗಿರುವರು. ನಾಟಕಕಾರ ಡಿ.ಎಸ್. ಚೌಗಲೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ವಾಮದೇವಪ್ಪ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಕಲ್ಪನಾ ರವೀಂದ್ರನಾಥ, ‘ಪ್ರಜಾವಾಣಿ’ ದಾವಣಗೆರೆ ಬ್ಯೂರೊ ಮುಖ್ಯಸ್ಥ ಸಿದ್ದಯ್ಯ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ರಂಗಬಳಗದ ಸದಸ್ಯರು ಭಾಗವಹಿಸಲಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ಪ್ರತಿಮಾ ಸಭಾ, ಅನ್ವೇಷಕರು ಆರ್ಟ್ ಫೌಂಡೇಶನ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.