ಎಸ್ ಬಿ ಐ ಬ್ಯಾಂಕ್ ನಲ್ಲಿ ಸೆಕ್ಯುರಿಟಿ ಹುದ್ದೆಗೆ ಅರ್ಜಿ ಆಹ್ವಾನ.

ಬೆಂಗಳೂರು: ಬೆಂಗಳೂರಿನ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಸೆಕ್ಯೂರಿಟಿ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮಾಜಿ ಸೈನಿಕರು (ಹವಾಲ್ದಾರ್ ಮತ್ತು ಅದಕ್ಕಿಂತ ಕೆಳಗಿನ ರ್ಯಾಂಕ್) ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು 21-10-2021 ಕೊನೆಯ ದಿನಾಂಕವಾಗಿದೆ.

ಆಸಕ್ತರು ಜಿಲ್ಲಾ ಮಟ್ಟದಲ್ಲಿರುವ ಸೈನಿಕ ಮತ್ತು ಪುನರ್ವಸತಿ ಇಲಾಖೆಯ ಕಛೇರಿಯಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಕಛೇರಿಗೆ ನೀಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರನ್ನು ಖುದ್ದಾಗಿ ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.

Leave a Reply

Your email address will not be published. Required fields are marked *

error: Content is protected !!