ಎಸ್ಸಿ ಎಸ್ಟಿ ಸಮುದಾಯದ ಉಚಿತ 75 ಯುನಿಟ್ ವಿದ್ಯುತ್ ಆದೇಶ ಹಿಂಪಡೆದ ಸರ್ಕಾರ
ಬೆಂಗಳೂರು: ಬೊಮ್ಮಾಯಿ ಸರ್ಕಾರ ಇತ್ತೀಚೆಗೆ ರಾಜ್ಯದ ಬಿಪಿಎಲ್ ಪಡಿತರ ಹೊಂದಿರುವ ಎಸ್ಸಿ ಎಸ್ಟಿ ಸಮುದಾಯದವರಿಗೆ ನೀಡಿದ್ದ ಉಚಿತ 75 ಯುನಿಟ್ ವಿದ್ಯುತ್ ಆದೇಶವನ್ನು ಹಿಂಪಡೆಯಲಾಗಿದೆ.
ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭಾಗ್ಯಜ್ಯೋತಿ | ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ಕಳೆದ ತಿಂಗಳಲ್ಲಿ ಅನುಷ್ಟಾನಕ್ಕೆ ತಂದಿದ್ದ ಆದೇಶವನ್ನು ಸರ್ಕಾರ ಹೊರಡಿಸಿದ್ದ ಸುತ್ತೋಲೆ ಸಂಖ್ಯೆ:ಎನರ್ಜಿ(232/ಪಿಎಸ್ಆರ್/2022 ದಿನಾಂಕ:24.08.2022ನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ದಿನಾಂಕ 03.09.2022 ರಂದು ಹಿಂಪಡೆಯಲಾಗಿದೆ ಎಂದು ಇಂಧನ ಇಲಾಖೆಯ ಅಧೀನ ಕಾರ್ಯದರ್ಶಿ ಸಹಿ ಇರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.