ಎಸ್ಸಿ-ಎಸ್ಟಿ ಕುಂದುಕೊರತೆ ಸಭೆಯಲ್ಲಿ ಸಿಜೆ ಆಸ್ಪತ್ರೆ ಗುತ್ತಿಗೆ ನೌಕರರ ಮೇಲಿನ ದಬ್ಬಾಳಿಕೆ ಕುರಿತು ಆರೋಪ – ಸ್ಪಂದಿಸಿದ ಎಸ್ಪಿ ಉಮಾ ಪ್ರಶಾಂತ್
ದಾವಣಗೆರೆ : ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಬುಧವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ನಿವಾರಣಾ ಸಭೆಯ ಎಸ್ಪಿ ಉಮಾ ಪ್ರಶಾಂತ್ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ವೇಳೆ ದಲಿತ ಮುಖಂಡರು ಹಲವಾರು ಸಮಸ್ಯೆಗಳ ಬಗ್ಗೆ ಸಭೆಯ ಗಮನಕ್ಕೆ ತಂದರು. ಇದೇ ಸಂದರ್ಭದಲ್ಲಿ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುವ ಎಸ್ಸಿ-ಎಸ್ಟಿ ಹೊರ ಗುತ್ತಿಗೆ ನೌಕರರ ಮೇಲೆ ನಡೆಸಲಾಗುತ್ತಿರುವ ದೌರ್ಜನ್ಯದ ಬಗ್ಗೆ ಪ್ರಸ್ತಾಪಿಸಲಾಯಿತು.
ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಎಲ್.ಸಿ. ನೀಲಗಿರಿಯಪ್ಪ ಅವರು ನೌಕರರ ಮೇಲೆ ನಡೆಸಲಾಗುತ್ತಿರುವ ದಬ್ಬಾಳಿಕೆಯನ್ನು ವಿವರಿಸುತ್ತಾ, ಮೆ. ದೀಕ್ಷಾ ಕನ್ಸಲ್ಟೆನ್ಸಿ ಮ್ಯಾನ್ ಪವರ್ಸೆಕ್ಯೂರಿಟಿ ಸರ್ವೀಸಸ್ ನ ಗೋಣಿವಾಡ ಮಂಜುನಾಥ, ಲೋಹತ್ ಕೆಟಿಜೆ ನಗರ, ಬಸಣ್ಣ, ಷರೀಫ್ ಇವರುಗಳು ನೌಕರರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ನೌಕರರು ತಮ್ಮ ಕಷ್ಟಗಳನ್ನು ಯಾವುದಾದರೂ ಸಂಘ ಸಂಸ್ಥೆಗಳ ಮುಖಂಡರಿಗೆ ತಿಳಿಸಿದಲ್ಲಿ ನಿಮ್ಮನ್ನು ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಸಿದ್ದಾರೆ ಎಂದು ದೂರಿದರು.
ದೂರಿನ ಹಿನ್ನೆಲೆಯಲ್ಲಿ ಎಸ್ಪಿ ಉಮಾ ಪ್ರಶಾಂತ್ ಅವರು, ಚಿಗಟೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ, ಬಡಾವಣೆ ಪೊಲೀಸರಿಗೆ ಪ್ರಕರಣ ದಾಖಲಿಸುವಂತೆ ಹೇಳಿದರು.
ಇದಕ್ಕೂ ಮುನ್ನ ಬೆಳಿಗ್ಗೆ ನಡೆದ ಸಭೆಯಲ್ಲಿ ಸಮಾಜದಲ್ಲಿ ಎಲ್ಲಾ ಸಮುದಾಯದೊಂದಿಗೆ ಶಾಂತಿ, ಸೌಹಾರ್ದತೆಯೊಂದಿಗೆ ಸಹಬಾಳ್ವೆ ಮಾಡಿದಾಗ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಉಮಾಪ್ರಶಾಂತ್ ತಿಳಿಸಿದರು.
ಎಲ್ಲಾ ಸಮುದಾಯದವರು ಶಾಂತಿ ಸೌಹರ್ದತೆಯಿಂದ ಇರಬೇಕು ಎಂಬುದು ನಮ್ಮ ಭಾವನೆ. ನೀವು ಕೂಡ ಕಾನೂನಿನ ಬಗ್ಗೆ ತಿಳಿದುಕೊಂಡು ನಮ್ಮೊಂದಿಗೆ ನೀವು ಸಹಕರಿಸಬೇಕು. ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಜೊತೆಗೆ ದುಶ್ಚಟಗಳಿಂದ ದೂರ ಇದ್ದಾಗ ಮನೆ, ಮಕ್ಕಳ ಭವಿಷ್ಯ ಉಜ್ವಲವಾಗಲಿದೆ ಎಂದರು.
ನಮ್ಮ ಸಮಾಜ ಸಧೃಡ ಹಾಗೂ ವಿದ್ಯಾವಂತÀ ಸಮಾಜವಾಗಬೇಕು ಎಂಬುವುದು ನಮ್ಮ ಆಶಯ, ಅದಕ್ಕೆ ನಮ್ಮ ಪೆÇಲೀಸ್ ಅಧಿಕಾರಿಗಳು ಹಗಲು ರಾತ್ರಿ ಕೆಲಸವನ್ನು ಮಾಡಿತ್ತಿದ್ದಾರೆ. ಅದಕ್ಕೆ ನಿಮ್ಮ ಬೆಂಬಲ ನಮಗೆ ನೀಡಬೇಕು, ಯಾವುದೇ ಸಮಸ್ಯೆ, ಕುಂದುಕೊರತೆಗಳಿದ್ದಲ್ಲಿ ಅದನ್ನು ಕಾನೂನಾತ್ಮಕವಾಗಿ ಪರಿಹರಿಸಲಾಗುತ್ತದೆ. ಕಾನೂನು ಕೈಗೆತ್ತಿಕೊಳ್ಳುವ ಕೆಲಸವನ್ನು ಯಾರು ಸಹ ಮಾಡಬಾರದು ಎಂದು ತಿಳಿಸಿದರು.
ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ ಸಂತೋಷ್, ಜಿಲ್ಲಾ ವಿಶೇಷ ವಿಭಾಗ ಪೆÇಲೀಸ್ ನಿರೀಕ್ಷಕ ಇಮ್ರಾನ್ ಬೇಗ್, ಅಬಕಾರಿ ಡಿ.ಎಸ್.ಪಿ ರವಿ ಮರಿಗೌಡರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸಿ.ಎಸ್ ಪ್ರಮುತೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.