ಹಗರಣ ವಿಜಯ ಯಾತ್ರೆ’ ನಡೆಸಿ.! ಬಿಜೆಪಿಗೆ ಕೆಆರ್‌ಎಸ್ ಪಕ್ಷದ ಸಲಹೆ
ದಾವಣಗೆರೆ: ಚನ್ನಗರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಅಧಿಕಾರ ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರ ನಡೆಸಿ ಬಂಧಿತರಾಗಿದ್ದು, ಈ ಪ್ರಕರಣದಲ್ಲಿ ಶಾಸಕರು ಅಧಿಕಾರ ದುರುಪಯೋಗ ಪಡೆಿಸಿಕೊಳ್ಳುವ ಸಾಧ್ಯತೆ ಇದ್ದು ಕೂಡಲೇ ಅವರನ್ನು ಬಂಧಿಸುವಂತೆ ಕೆಆರ್‌ಎಸ್‌ನ ಜಿಲ್ಲಾ ಕಾರ್ಯದರ್ಶಿ ಮಲ್ಲಪ್ಪ ಕೆ. ಒತ್ತಾಯಿಸಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಕೂಡಲೇ ಬಂಧಿಸಬೇಕು. ಹಾಗೂ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೇ.40 ಕಮಿಷನ್ ಆರೋಪಕ್ಕೆ ಸಾಕ್ಷಿ ಕೇಳಿದ್ದರು. ಇದೀಗ ಸಾಕ್ಷಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕಾನೂನು ಘಟಕದ ಜಿಲ್ಲಾಧ್ಯಕ್ಷ ಬಿ.ಸೋಮಶೇಖರ್ ಆಗ್ರಹಿಸಿದರು.
ಪ್ರಕರಣವನ್ನು ನಿಷ್ಪಕ್ಷಪಾತವಾಗಿ ಇಡಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ ಅವರು, ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಬದರು ಹಗರಣ ಸಂಕಲ್ಪ ಯಾತ್ರೆ ನಡೆಸುವುದು ಸೂಕ್ತ ಎಂದು ಲೇವಡಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಅಭಿಷೇಕ್ ಎನ್.ಎಸ್. ದಾವುಲ್, ವೀರಭದ್ರಪ್ಪ, ಅಜ್ಜೇಶ್, ಕರಿಬಸಪ್ಪ ನಾಯ್ಕ ಕೆ. ಇತರರು ಇದ್ದರು.