Scheduled caste; ಜಿಮ್ ತೆರೆಯಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ, ಆ. 19 : 2023-24ನೇ ಸಾಲಿನ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಪರಿಶಿಷ್ಟ ಜಾತಿಯ (Scheduled caste) ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ (gym) ಸ್ಥಾಪನೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾಗಿರಬೇಕು. ಅರ್ಜಿ ನಮೂನೆಗಳನ್ನು ಜಿಲ್ಲಾ ಕ್ರೀಡಾಂಗಣದಲ್ಲಿರುವ ಸಹಾಯಕ ನಿರ್ದೇಶಕರ ಕಾರ್ಯಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಪಡೆದು ಸೆ.5ರ ಒಳಗಾಗಿ ಅದೇ ಕಛೇರಿಗೆ ಸಲ್ಲಿಸಬಹುದಾಗಿದೆ.
ಸ್ಪಂದನಾಳಿಗೆ “ವಿಶ್ವಕಲಾರತ್ನ” ರಾಜ್ಯ ಪ್ರಶಸ್ತಿ
ಹೆಚ್ಚಿನ ಮಾಹಿತಿಗಾಗಿ 081922374480ಗೆ ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.