scholarship; ಕ.ರಾ.ಮು.ವಿ ಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ದಾವಣಗೆರೆ; ಅ. 11 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2023-24ನೇ ಸಾಲಿನ ಜುಲೈ ಆವೃತ್ತಿಯಲ್ಲಿ ವಿವಿಧ ಕೋರ್ಸಗಳಿಗೆ ಪ್ರವೇಶಾತಿ ಪಡೆದಿರುವ ಪ.ಜಾತಿ, ಪ.ವರ್ಗದ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಎಸ್.ಎಸ್.ಪಿ ವಿದ್ಯಾರ್ಥಿವೇತನಕ್ಕೆ (scholarship) ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಸಂಬಂಧಪಟ್ಟ ಬ್ಯಾಂಕಿಗೆ ಭೇಟಿ ನೀಡಿ, ತಮ್ಮ ಆಧಾರ್ ಸಂಖ್ಯೆಯನ್ನು ಎನ್.ಪಿ.ಸಿ.ಐ(ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ) ರಲ್ಲಿ ಕಡ್ಡಾಯವಾಗಿ ಬ್ಯಾಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿದ ನಂತರ https://ssp.karnataka.gov.in/ ನಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕು.
Cycling; ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆ
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಿದ್ಯಾರ್ಥಿವೇತನ ಘಟಕದ ಸ್ಥಿರ ದೂ.ಸಂ. 0821 250073 ಸಂಪರ್ಕಿಸಲು ಕ.ರಾ.ಮು.ವಿ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.