ಶಾಲಾ, ಕಾಲೇಜುಗಳಲ್ಲಿ ಕೊವಿಡ್ ಹೆಚ್ಚಳ.! ಶಾಲೆ ನಿಲ್ಲಿಸಬೇಕಾದ ಪರಿಸ್ಥಿತಿ ಬಂದರೆ, ಶಿಕ್ಷಣ ಇಲಾಖೆ ಸಿದ್ಧವಿದೆ.! ಶಿಕ್ಷಣ ಸಚಿವ ಬಿ ಸಿ ನಾಗೇಶ್

875MKi5w_400x400

ಬೆಂಗಳೂರು: ಕೊವಿಡ್ 19 ತೀವ್ರತೆ ಹೆಚ್ಚಳವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಹೇಳಿಕೆ ನೀಡಿದ್ದು, ಪೋಷಕರು ಯಾವುದೇ ಆತಂಕಕ್ಕೊಳಗಾಗಬೇಡಿ. ಶಿಕ್ಷಣ ಇಲಾಖೆಯು ಸದ್ಯದ ಪರಿಸ್ಥಿತಿಯನ್ನು ಗಮನಿಸುತ್ತಿದೆ. ಅಗತ್ಯ ಬಂದರೆ, ಕಠಿಣ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಸಿದ್ಧವಿದೆ ಎಂದು ತಿಳಿಸಿದ್ದಾರೆ.

ಕೊವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಇಲಾಖೆಯು ಪರಿಸ್ಥಿತಿಗಳನ್ನು ಗಮನಿಸುತ್ತಿದೆ. ಅಂತಹದ್ದೇನಾದರೂ ಘಟನೆಗಳು ನಡೆಯುತ್ತಿದ್ದರೆ, ಪರ್ಯಾಯ ವ್ಯವಸ್ಥೆಗಳನ್ನು ಕೈಗೊಳ್ಳುವ ಬಗ್ಗೆ ಯೋಚಿಸುತ್ತೇವೆ. ಅಕಸ್ಮಾತ್ ಆಗಿ ಪರೀಕ್ಷೆಗಳನ್ನು ನಿಲ್ಲಿಸುವ ಪರಿಸ್ಥಿತಿಗಳು ಬಂದರೆ, ಪರೀಕ್ಷೆಗಳನ್ನೂ ನಿಲ್ಲಿಸುತ್ತೇವೆ. ಈ ಬಗ್ಗೆ ಗಾಬರಿಗೊಳ್ಳಬೇಕಾದ ಅಗತ್ಯವಿಲ್ಲ ಎಂದು ಸಚಿವರು ತಿಳಿಸಿದರು.

ಸೋಂಕಿನ ಹಿನ್ನೆಲೆಯ ಆಕಸ್ಮಾತ್ ಆಗಿ ಪರೀಕ್ಷೆ ನಿಲ್ಲಿಸಬೇಕು, ಶಾಲೆ ನಿಲ್ಲಿಸಬೇಕಾದ ಪರಿಸ್ಥಿತಿ ಬಂದರೆ, ಅದಕ್ಕೂ ಶಿಕ್ಷಣ ಇಲಾಖೆ ಸಿದ್ಧವಿದೆ. ಈ ಸಂಬಂಧ ಕೊವಿಡ್ ತಜ್ಞರಿಂದ ಪ್ರತಿ ದಿನವೂ ವರದಿ ಪಡೆದುಕೊಳ್ಳುತ್ತಿದ್ದೇವೆ ಎಂದು ವಿಧಾನಸೌಧದಲ್ಲಿ ಬಿ.ಸಿ.ನಾಗೇಶ್ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!