ಸವಣೂರ ತಾಲ್ಲೂಕಿನ ಹಿರೇಮುಗದೂರ ಗ್ರಾಮಕ್ಕೆ ಬಿ ಆರ್ ಪಿ ಭೇಟಿ ಪರಿಶೀಲನೆ
ಹಾವೇರಿ: ಸವಣೂರ ತಾಲ್ಲೂಕಿನ ಹಿರೇಮುಗದೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಗಂಗಾಧರ ಹಿರೇಮಠ ಭೇಟಿ ನೀಡಿ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಪರಿಶೀಲನೆ ನಡೆಸಿದರು.
ನಲಿ ಕಲಿ ತರಗತಿಯ ಕೊಠಡಿಗೆ ಹೋಗಿ ಮಕ್ಕಳ ಕಲಿಕೆ ಹಾಗೂ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು.
ನಂತರ ಮಾತನಾಡಿದ ಬಿಆರ್ ಪಿ ಗಳಾದ ಗಂಗಾಧರ ಹಿರೇಮಠ ಗುಣಾತ್ಮಕ ಶಿಕ್ಷಣ ನೀಡುವ ಕಾಯಕದಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳು ಶಿಕ್ಷಕರ ಶ್ರಮದಿಂದ ಖಾಸಗಿ ಶಾಲೆಗಳಿಗೆ ಯಾವುದರಲ್ಲಿಯೂ ಕಡಿಮೆ ಇಲ್ಲದಂತೆ ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.ಎಲ್ಲಾ ರೀತಿಯ ಸಹಕಾರ ನಮ್ಮಿಂದ ನೀಡಲಾಗುವುದು ಎಂದು ವಿದ್ಯಾರ್ಥಿಗಳ ಕಲಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ನಿಂಗಪ್ಪ ಎಂ ಆರೇರ. ಪ್ರಧಾನ ಗುರುಗಳಾದ ಸಿ.ಪಿ ಭಜಂತ್ರಿ. ಎಸ್ ಡಿಎಂಸಿ ಅಧ್ಯಕ್ಷರಾದ ಸುರೇಶ ಬರದೂರ ಸೇರಿದಂತೆ ಗುರು ಬಳಗದವರು ಬಿಆರ್ ಪಿ ಗಳಿಗೆ ಸಾಥ್ ನೀಡಿದರು.