ದ್ವಿತೀಯ ಪಿ.ಯು.ಸಿ ಪರೀಕ್ಷೆ, 12755 ವಿದ್ಯಾರ್ಥಿಗಳು ಹಾಜರು
ದಾವಣಗೆರೆ: ಮಾರ್ಚ್ 20 ರಂದು ನಡೆದ ದ್ವಿತೀಯ ಪಿಯುಸಿ ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್ ಮತ್ತು ಎಲೆಕ್ಟ್ರಾನಿಕ್ಸ್ ವಿಷಯದ ಪರೀಕ್ಷೆ ನಡೆದಿದ್ದು 12755 ವಿದ್ಯಾರ್ಥಿಗಳು ಹಾಜರಾಗಿದ್ದರು.
ಸಮಾಜಶಾಸ್ತ್ರ ವಿಷಯದಲ್ಲಿ 4898 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು 4353 ವಿದ್ಯಾರ್ಥಿಗಳು ಹಾಜರಾಗಿ 545 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ 1762 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು 1736 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 26 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮತ್ತು ಎಲೆಕ್ಟ್ರಾನಿಕ್ಸ್ ವಿಷಯದಲ್ಲಿ 6 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕರಿಸಿದ್ದಪ್ಪ ತಿಳಿಸಿದ್ದಾರೆ.