ದ್ವಿತೀಯ ಪಿಯುಸಿ ಪರೀಕ್ಷೆ ಜಿಲ್ಲೆಯಲ್ಲಿ ಶಾಂತಿಯುತ

Second PUC exam is peaceful in the district

ದ್ವಿತೀಯ ಪಿಯುಸಿ ಪರೀಕ್ಷೆ ಜಿಲ್ಲೆಯಲ್ಲಿ ಶಾಂತಿಯುತ

ದಾವಣಗೆರೆ: ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿರುವ ಪಿಯುಸಿ ಪರೀಕ್ಷೆಯು ಜಿಲ್ಲೆಯ 31 ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿಯುತವಾಗಿ ನಡೆದಿದೆ. ಮಾರ್ಚ್ 09 ರಂದು ಕನ್ನಡ ಭಾಷೆ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆಗಳು ನಡೆದಿವೆ.
ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ದ್ವಿತೀಯ ಪಿಯುಸಿ ಪರೀಕ್ಷೆ ಮೊದಲ ದಿನವಾದ ಗುರುವಾರ ನಗರದ ಸೀತಮ್ಮ ಕಾಲೇಜು.ದ್ವಿತೀಯ ಪಿ ಯು ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ ಪರಿಶೀಲಿಸಿದರು.

ಕನ್ನಡ ವಿಷಯಕ್ಕೆ ಒಟ್ಟು 16178 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದು,  ಈ ಪೈಕಿ 15,465 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 713 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಸಂಸ್ಕøತ  ವಿಷಯದಲ್ಲಿ 7,151 ವಿದ್ಯಾರ್ಥಿಗಳಲ್ಲಿ 6,723 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 428 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಅರೇಬಿಕ್ ವಿಷಯದಲ್ಲಿ  ಯಾವುದೇ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವುದಿಲ್ಲ.

Leave a Reply

Your email address will not be published. Required fields are marked *

error: Content is protected !!