ಏಪ್ರಿಲ್/ಮೇ-2022ರ ದ್ವಿತೀಯ ಪಿಯುಸಿ ಫಲಿತಾಂಶ!

ದಾವಣಗೆರೆ: ಏಪ್ರಿಲ್/ಮೇ-2022ರ ಫಲಿತಾಂಶ ಇಂದು ಪ್ರಕಟವಾಗಿದ್ದು ರಾಜ್ಯಾದ್ಯಂತ ಒಟ್ಟು 61.88ರಷ್ಟು ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ 11 ವಿದ್ಯಾರ್ಥಿಗಳು, ಕಾಮರ್ಸ್ ವಿಭಾಗದಲ್ಲಿ 10 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 13 ವಿದ್ಯಾರ್ಥಿಗಳು ಟಾಪರ್‌ನಲ್ಲಿ ತೇರ್ಗಡೆ ಹೊಂದಿದ್ದಾರೆ.

ಸದರಿ ಪರೀಕ್ಷೆಗೆ 5,99,794 ಹೊಸ ವಿದ್ಯಾರ್ಥಿಗಳು ಹಾಜರಾಗಿದ್ದು, 4,02,697 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನೂ 61,838 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇದರಲ್ಲಿ 14,403 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 21,931 ಖಾಸಗಿ ಅಭ್ಯರ್ಥಿಗಳು ಹಾಜರಾಗಿದ್ದು 5866 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಒಟ್ಟು ಹಾಜರಾದ 6,83,563 ಅಭ್ಯರ್ಥಿಗಳಲ್ಲಿ 4,22,966 ಅಭ್ಯರ್ಥಿಗಳು ತೇರ್ಗಡೆ ಹೊಂದುವ ಮೂಲಕ 61.88ರಷ್ಟು ಫಲಿತಾಂಶ ಬಂದ0ತಾಗಿದೆ.
91,106 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 2,14,115 ವಿದ್ಯಾರ್ಥಿಗಳುಪ್ರಥಮ ದರ್ಜೆಯಲ್ಲಿ, 68,444 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಮತ್ತು 49,301 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆ ಹೊಂದುವ ಮೂಲಕ 422966 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಏಪ್ರಿಲ್ 22ರ 2022 ರಿಂದ ಮೇ 18ರ 2022ರವರೆಗೆ ರಾಜ್ಯದ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. 81 ಮೌಲ್ಯಮಾಪನ ಕೇಂದ್ರಗಳಲ್ಲಿ ಮೇ.22ರಿಂದ ಜೂನ್ 11ರವರೆಗೆ 17,691 ಮೌಲ್ಯಮಾಪಕರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಲಾಗಿತ್ತು.

 

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!