ದಾವಣಗೆರೆಯ ಸೀಲ್ ಡೌನ್ ಗ್ರಾಮಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಡಳಿತ
ದಾವಣಗೆರೆ: ಎಸ್ಪಿ ಸಿ. ಬಿ. ರಿಷ್ಯಂತ್, ಡಿಸಿ ಮಹಾಂತೇಶ್ ಬೀಳಗಿ ಹಾಗೂ ಸಿಇಓ ವಿಜಯ ಮಹಾಂತೇಶ್ ದಾನಮ್ಮನವರ್ ಎಸಿ ಮಮತ ಹಿರೇಗೌಡರ್ ಹಾಗೂ ಇತರೆ ಅಧಿಕಾರಿಗಳೊಂದಿಗೆ ಕೋವಿಡ್ ವ್ಯಾಪಿಸಿರುವ ಹಿನ್ನೆಲೆಯಲ್ಲಿ ಸೀಲ್ಡೌನ್ ಮಾಡಲಾದ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಾನುವಳ್ಳಿ, ನಂದಿತಾವರೆ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರುಗಳು, ಜನರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ, ಎಲ್ಲಾರು ಲಸಿಕೆ ಪಡೆಯುವಂತೆ ತಿಳಿಸಿದರು. ಕೋವಿಡ್ ಸುರಕ್ಷಾ ಕ್ರಮಗಳನ್ನು ಪಾಲಿಸುವಂತೆ ತಿಳಿಸಿದರು.ನಂತರ ಕೋವಿಡ್ ನಿಂದ ಮೃತ ಪಟ್ಟ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ಉಪವಿಭಾಗದ ಪೊಲೀಸ್ ಅಧಿಕಾರಿಗಳು ಮತಗತು ಸಿಬ್ಬಂದಿಗಳು ಉಪಸ್ಥಿತರಿದ್ದರು.