ಲೋಕ ಅದಾಲತ್‌ನಲ್ಲಿ ಜಿಲ್ಲಾ ಗ್ರಾಹಕರ ದೂರುಗಳು ಇತ್ಯರ್ಥ

Settlement of complaints of district consumers in Lok Adalat
ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಡಿಸೆಂಬರ್ 9 ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಜರುಗಿತು. ಅದಾಲತ್‌ನಲ್ಲಿ ಜಿಲ್ಲಾ ಗ್ರಾಹಕರ ದೂರುಗಳು, ಅಮಲ್ದಾರಿ ದೂರುಗಳು ಹಾಗೂ ಕಡತಗಳ ರಾಜೀ ಸಂಧಾನ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಯಿತು.
ಅದಾಲತ್‌ನಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ರಾಜೇಶ್ವರಿ ಎನ್ ಹೆಗಡೆ, ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಧೀಶರಾದ ಮಹಾವೀರ್ ಎಂ.ಕರೆಣ್ಣನವರ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ್ ಈರಪ್ಪ ಶಿಗ್ಲಿ ಉಪಸ್ಥಿತರಿದ್ದರು.