ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಫ್​ಐಆರ್

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದವೇ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ. ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪರನ್ನು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಎದುರಾಗಿದೆ.

Leave a Reply

Your email address will not be published. Required fields are marked *

error: Content is protected !!