ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ರಾಷ್ಟ್ರ ಮಟ್ಟದಲ್ಲಿ ಪದಕ ಪಡೆದು ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಿದೆ.
ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ, ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಹ ಕ್ರೀಡಾಪಟುಗಳು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಛೇರಿಯಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಸೆ.08 ಕೊನೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗಾಗಿ 08192-237480 ಗೆ ಸಂಪರ್ಕಿಸಬಹುದೆAದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.