ಬಾಪೂಜಿ ಆಸ್ಪತ್ರೆಯಲ್ಲಿ ವೈದ್ಯಕೀಯ ತೀವ್ರ ನಿಗಾ ಘಟಕ ಉದ್ಘಾಟಿಸಿದ ಶಾಮನೂರು ಶಿವಶಂಕರಪ್ಪ
ದಾವಣಗೆರೆ : ಮಾರ್ಚ್ 14 ರಂದು ಡಾ. ಶಾಮನೂರು ಶಿವಶಂಕರಪ್ಪ ಅವರು ಬಾಪೂಜಿ ಆಸ್ಪತ್ರೆಯಲ್ಲಿ ಹೊಸದಾಗಿ ನಿಯೋಜಿಸಲಾದ ವೈದ್ಯಕೀಯ ತೀವ್ರ ನಿಗಾ ಘಟಕವನ್ನು (ಎಂಐಸಿಯು) ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಾಪೂಜಿ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಸದಸ್ಯೆ ಶ್ರೀಮತಿ ಕಿರವಾಡಿ ಗಿರಿಜಮ್ಮ, ಸದಸ್ಯ ಅಥಣಿ ವೀರಣ್ಣ, ಬಾಪೂಜಿ ಆಸ್ಪತ್ರೆ ವೈದ್ಯಕೀಯ ನಿರ್ದೇಶಕರಾದ ಡಾ. ಡಿ.ಎಸ್ ಕುಮಾರ್, ಜೆ.ಜೆ.ಎಂ ವೈದ್ಯಕೀಯ ಕಾಲೇಜು ಪ್ರಾಂಶುಪಾಲರಾದ ಡಾ. ಎಸ್.ಬಿ ಮುರುಗೇಶ್, ವಿಭಾಗದ ಮುಖ್ಯಸ್ಥ ಡಾ. ರಾಜೀವ್ ಅಗರ್ವಾಲ್ ಹಾಗೂ ಇತರೆ ಅಧ್ಯಾಪಕರು, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.