ಸ್ವಚ್ಛತೆಯಿಂದ ರೋಗ ಮುಕ್ತ ಸಮಾಜ ನಿರ್ಮಾಣ ಸಾಧ್ಯ : ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಸ್ವಚ್ಚತೆಗೆ ಆದ್ಯತೆಯಿಂದ ರೋಗಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂಬುದನ್ನು ಮನಗಂಡಿರುವ ಸರ್ಕಾರಗಳು ಇಂದು ದೇಶದಲ್ಲಿ ಸ್ವಚ್ಚತೆಗೆ ಆದ್ಯತೆ ನೀಡುತ್ತಿದ್ದು, ನಾಗರೀಕರು ಸರ್ಕಾರದ ಕಾರ‍್ಯಕ್ಕೆ ಬೆಂಬಲವಾಗಿರಬೇಕೆಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಕರೆ ನೀಡಿದರು.

ತಾಲ್ಲೂಕಿನ ಶಿರಮಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದ ರವೀಂದ್ರನಾಥ ಬಡಾವಣೆಯಲ್ಲಿ ಸ್ವಚ್ಛ ಸಂಕೀರ್ಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ದೇಶ ಶೇ.90ರಷ್ಟು ಹಳ್ಳಿಗಳನ್ನು ಹೊಂದಿರುವ ದೇಶವಾಗಿದ್ದು, ಹಳ್ಳಿಗಳಲ್ಲಿ ಸ್ವಚ್ಚತೆಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇರುವುದರಿಂದ ಹಳ್ಳಿಗಳಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಸರ್ಕಾರ ಆದ್ಯತೆ ನೀಡುತ್ತಿದ್ದು, ಗ್ರಾಮೀಣ ಭಾಗದ ಜನರು ಸಹ ಸ್ವಚ್ಚತೆಗೆ ಆದ್ಯತೆ ನೀಡಿ ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಕರೆ ನೀಡಿದರು.

ಶಾಸಕ ಎಸ್.ಎ.ರವೀಂದ್ರನಾಥ್ ಮಾತನಾಡಿ ಈ ಹಿಂದೆ ಗ್ರಾಮೀಣ ಭಾಗದಲ್ಲಿ ಎಲ್ಲೆಂದರಲ್ಲಿ ತಿಪ್ಪೆ ಹಾಕಿ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದವು. ಇದಕ್ಕೆ ಸರ್ಕಾರ ಪರಿಹಾರವಾಗಿ ಇಂತಹ ಸಂಕೀರ್ಣಗಳನ್ನು ನಿರ್ಮಿಸಿ ರೋಗಮುಕ್ತ ಸಮಾಜಕ್ಕೆ ಮುಂದಾಗಿದ್ದು, ಕೇವಲ ದೊಡ್ಡ ನಗರಗಳಿಗೆ ಸೀಮಿತವಾಗಿದ್ದ ಇಂತಹ ಸಂಕೀರ್ಣಗಳು ಇಂದು ಗ್ರಾಮಾಂತರ ಪ್ರದೇಶದಲ್ಲೂ ಆರಂಭಗೊಂಡಿದ್ದು, ಗ್ರಾಮೀಣ ಭಾಗದ ಜನರು ಗ್ರಾಮಪಂಚಾಯಿತಿಯೊAದಿಗೆ ಕೈಜೋಡಿಸಿದರೆ ಕಾಂಪೋಜಿಟ್ ಗೊಬ್ಬರ ತಯಾರಾಗಲಿದ್ದು, ಇದರಿಂದ ರೈತರ ಬೆಳೆಗಳಿಗೂ ಅನುಕೂಲವಾಗಲಿದೆ ಎಂದರು.

ಈಲ್ಲಾ ಪಂಚಾಯಿತಿ ಸದಸ್ಯ ಜಿ.ಸಿ.ನಿಂಗಪ್ಪ ಮಾತನಾಡಿ ಗ್ರಾಮಪಂಚಾಯಿತಿಗಳಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಅನುದಾನ ಲಭ್ಯವಾಗುತ್ತಿದ್ದು, ಈ ಅನುದಾನಗಳನ್ನು ಬಳಸಿಕೊಂಡು ಉತ್ತಮ ಕೆಲಸಗಳನ್ನು ಶಿರಮಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಮಾಡಲಿ ಎಂದು ಆಶಿಸಿದರು.
ತಾಲ್ಲೂಕು ಪಂಚಾಯಿತಿ ಸದಸ್ಯ ಎಂ.ಮAಜಪ್ಪ ಮಾತನಾಡಿ ಗ್ರಾಮಸ್ಥರ ಒಳ್ಳಿತಾಗಿಯೇ ಸರ್ಕಾರ ಇಂತಹ ಕರ‍್ಯಕ್ರಮಗಳನ್ನು ರೂಪಿಸುತ್ತಿದ್ದು, ಗ್ರಾಮಸ್ಥರು ಕೈಜೋಡಿಸುವ ಮೂಲಕ ಪಂಚಾಯಿತಿ ಕರ‍್ಯಕ್ಕೆ ಬೆಂಬಲವಾಗಿ ನಿಲ್ಲಬೇಕೆಂದು ಕರೆ ನೀಡಿದರು.

ಮತ್ತೊರ್ವ ತಾಲ್ಲೂಕು ಪಂಚಾಯಿತಿ ಸದಸ್ಯ ಎ.ಬಿ.ಹನುಮಂತಪ್ಪ ಮಾತನಾಡಿ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಮಾಡಬೇಕೆಂದು ಕರೆ ನೀಡಿದರು.

ಗ್ರಾಮಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿನುತಾ ಎ.ಎಂ.ಸುರೇಶ್ ಬಾಬು ಅವರು ಮಾತನಾಡಿ ಇದೊಂದು ಉತ್ತಮ ಕರ‍್ಯಕ್ರಮವಾಗಿದ್ದು, ಗ್ರಾಮಸ್ಥರು ಸಹಕರಿಸುವಂತೆ ಮನವಿ ಮಾಡಿ ಸರ್ಕಾರ ಕೋವಿಡ್ ನೆಪವೊಡ್ಡಿ ಅನುದಾನ ನೀಡದ ಕಾರಣ ಅನೇಕ ಗ್ರಾಮಾಭೀವೃದ್ಧಿ ಕೆಲಸಗಳು ಸ್ಥಗಿತಗೊಂಡಿದ್ದು, ಶಾಸಕರು ಅನುದಾನ ಒದಗಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ಲಲಿತಮ್ಮ ದೇವೆಂದ್ರಪ್ಪ, ಅಭಿವೃದ್ಧಿ ಅಧಿಕಾರಿ ಕಾತ್ಯಾಯಿನಿ, ಎಸ್.ಎಂ.ರುದ್ರೇಶ್, ಎಸ್.ಬಿ.ಚಂದ್ರಪ್ಪ, ಎಸ್.ಕೆ.ಮಾಲತೇಶ್, ವಿರೇಂದ್ರ ಪಾಟೀಲ್, ಶಶಿ, ಎ.ಕೆ.ನೀಲಪ್ಪ, ಗುಡ್ಡಪ್ಪ, ಮಲ್ಲಿಕಾರ್ಜುನ್, ಕೆ.ಎಸ್.ರೇವಣಸಿದ್ದಪ್ಪ, ಆರ್.ದಿನೇಶ್, ಗ್ರಾಮಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!