ದಾವಣಗೆರೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು: ಡಾ.ಶಾಮನೂರು ಶಿವಶಂಕರಪ್ಪ ಸ್ವಾಗತ
ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸುವ ಬಗ್ಗೆ ಸರ್ಕಾರದ ನಿರ್ಧಾರವನ್ನು ಶಾಸಕರು, ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಡಾ.ಶಾಮನೂರು ಶಿವಶಂಕರಪ್ಪನವರು ಸ್ವಾಗತಿಸಿದ್ದಾರೆ.
ದಾವಣಗೆರೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಆರಂಭವಾಗುವುದರಿಂದ ದಾವಣಗೆರೆ ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಸರ್ಕಾರ ಆದಷ್ಟು ಶೀಘ್ರವಾಗಿ ದಾವಣಗೆರೆಯಲ್ಲಿ ಮೆಡಿಕಲ್ ಕಾಲೇಜು ಆರಂಭಿಸುವಂತೆ ಒತ್ತಾಯಿಸಿರುವ ಅವರು ಮೆಡಿಕಲ್ ಕಾಲೇಜು ಆರಂಭಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.