ಶರಾವತಿ, ತುಂಗೆ, ವರದಾ, ಮಾಲತಿ ನದಿಗಳಲ್ಲಿ ಮಳೆ ನೀರಿನ ಅಬ್ಬರ.!ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ ಐದು ಅಡಿ ನೀರು

ಶರಾವತಿ, ತುಂಗೆ, ವರದಾ, ಮಾಲತಿ ನದಿಗಳಲ್ಲಿ ಮಳೆ ನೀರಿನ ಅಬ್ಬರ.!ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ ಐದು ಅಡಿ ನೀರು

ಶಿವಮೊಗ್ಗ: ಶಿವಮೊಗ್ಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬಿಸಿಲ ಝಳವೇ ಕಾಣದಂತೆ ಮೋಡಗಳು ಛಿರಿಛಿರಿ ಮಳೆ ಸುರಿಸುತ್ತಿವೆ. ಇನ್ನೂ ಮಳೆಯಿಂದಾಗಿ ಶರಾವತಿ, ಮಾಲತಿ, ತುಂಗಾ, ಭದ್ರಾ , ವರದಾ ನದಿಗಳು ಮೈದುಂಬಿ ಹರಿಯುತ್ತಿವೆ.

ಇನ್ನೂ ಲಿಂಗನಮಕ್ಕಿ ಡ್ಯಾಂ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಬೀಳುತ್ತಿರುವ ಭಾರೀ ವರ್ಷಧಾರೆಯಿಂದ, 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 5 ಅಡಿ ನೀರು ಹರಿದುಬಂದಿದೆ. ಇವತ್ತು ಬೆಳಗ್ಗೆ ಲಭ್ಯವಾಗಿರುವ ಅಂಕಿಅಂಶಗಳ ಮಾಹಿತಿ ಪ್ರಕಾರ, ಡ್ಯಾಂಗೆ 73,505 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಪ್ರಸ್ತುತ ಡ್ಯಾಂನ ನೀರಿನ ಮಟ್ಟ 1775.15 (ಗರಿಷ್ಠ ಮಟ್ಟ : 1819) ಅಡಿಯಿದೆ.

ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 1797.95 ಅಡಿ ನೀರು ಸಂಗ್ರಹವಾಗಿತ್ತು. ಭದ್ರಾ ಜಲಾಶಯದ ಒಳಹರಿವಿನಲ್ಲಿಯೂ ಹೆಚ್ಚಳವಾಗಿದ್ದು, ಒಂದೇ ದಿನ ಡ್ಯಾಂನಲ್ಲಿ 4 ಅಡಿ ನೀರು ಸಂಗ್ರಹವಾಗಿದೆ. ಸೋಮವಾರ ಬೆಳಿಗ್ಗೆಯ ಮಾಹಿತಿಯಂತೆ ಡ್ಯಾಂನ ಒಳಹರಿವು 39,349 ಕ್ಯೂಸೆಕ್ ಇದೆ. ಪ್ರಸ್ತುತ ಡ್ಯಾಂನಲ್ಲಿ 149.6 (ಗರಿಷ್ಠ ಮಟ್ಟ : 186) ಅಡಿ ನೀರಿದ್ದು, ಹೊರಹರಿವನ್ನು ಸ್ಥಗಿತಗೊಳಿಸಲಾಗಿದೆ.

ಹೆಚ್ಚಿದ ಹೊರ ಹರಿವು: ತುಂಗಾ ಡ್ಯಾಂ ಒಳಹರಿವಿನಲ್ಲಿಯೂ ನಿರಂತರವಾಗಿ ಏರಿಕೆಯಾಗುತ್ತಿದೆ. ಸೋಮವಾರ ಬೆಳಿಗ್ಗೆ ತುಂಗಾ ಡ್ಯಾಂನ ಒಳಹರಿವು 57,352 ಕ್ಯೂಸೆಕ್ ಇದೆ. ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ, ಒಳಹರಿವಿನಷ್ಟೆ ನೀರನ್ನು ಹೊಸಪೇಟೆಯ ಟಿ.ಬಿ. ಡ್ಯಾಂಗೆ ಹೊರ ಬಿಡಲಾಗುತ್ತಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!