ಲಲಿತಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಶಾರದಾಪೂಜೆ

ದಾವಣಗೆರೆ : ನಗರದ ಲೋಕಿಕೆರೆ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿರುವ ಲಲಿತಾ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶಾರದಾ ಪೂಜೆ ಮತ್ತು ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಆಚರಿಸಲಾಯಿತು. ಈ ಸಮಾರಂಭವನ್ನು ಪ್ರತಿ ವರ್ಷದಂತೆ ಆಚರಿಸಲಾಗುತ್ತಿದ್ದು, ಈ ವರ್ಷವೂ ಕೂಡ 9ನೇ ತರಗತಿ ವಿದ್ಯಾರ್ಥಿಗಳಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ನೀಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಅಧ್ಯಕ್ಷರಾದಂತಹ ಶ್ರೀಮತಿ ಶಶಿಕಲಾ ಇ.ಆರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಆಡಳಿತಾಧಿಕಾರಿಗಳು, ಮುಖ್ಯಶಿಕ್ಷಕರು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ವೇಳೆ ಸಾಂಸ್ಕöತಿಕ ಚಟುವಟಿಕೆಗಳು, ವಿದ್ಯಾರ್ಥಿಗಳ ಅನಿಸಿಕೆ ,ಅಧ್ಯಕ್ಷರ ಭಾಷಣ ಅದ್ಭುತವಾಗಿ ಮೂಡಿಬಂದವು. 9ನೇ ತರಗತಿ ವಿದ್ಯಾರ್ಥಿನಿಯಾದ ಕುಮಾರಿ ದೀಕ್ಷಾ ಎಸ್ .ಎಂ ಕಾರ್ಯಕ್ರಮದ ನಿರೂಪಣೆ ಮಾಡಿದರು.ಚೇತನ್ ಸ್ವಾಗತಿಸಿದರು. ಬಿಂದು ಶೇಖರ್ ವಂದನಾರ್ಪಣೆಯನ್ನು ನಡೆಸಿಕೊಟ್ಟರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!