ಶಾಸಕ ಶಾಮನೂರು ಶಿವಶಂಕರಪ್ಪಗೆ ಶರಣಬಸವ ವಿವಿಯಿಂದ ಗೌರವ ಡಾಕ್ಟರೇಟ್ !

IMG-20210908-WA0011

ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರೂ, ಶಾಸಕರೂ ಆಗಿರುವ ಶಾಮನೂರು ಶಿವಶಂಕರಪ್ಪ ಅವರಿಗೆ ಕಲುಬುರಗಿಯ ಶರಣಬಸವ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಗೆ ಭಾಜನರಾಗಿದ್ದಾರೆ.

ಸೆ. 10ರಂದು ಗುಲ್ಬರ್ಗಾದ ಶರಣಬಸವ ವಿಶ್ವವಿದ್ಯಾಲಯದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ವಿವಿಯ ಕುಲಾಧಿಪತಿಗಳಾದ ಪರಮಪೂಜ್ಯ ಡಾ. ಶರಣಬಸವಪ್ಪ ಅವರು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದ್ದಾರೆ ಎಂದು ವಿಶ್ವವಿದ್ಯಾಲಯದ ಉಪಕುಲಪತಿ ನಿರಂಜನ್ ವಿ ನಿಷ್ಟಿ ತಿಳಿಸಿದ್ದಾರೆ.

ಜುಲೈ 30ರಂದು ನಡೆದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರ ಸಭೆಯಲ್ಲಿ ಡಾ|| ಶಾಮನೂರು ಶಿವಶಂಕರಪ್ಪನವರು ಶಿಕ್ಷಣ, ಸಮಾಜ ಸೇವೆಯನ್ನು ಗುರುತಿಸಿ ವಿಶ್ವವಿದ್ಯಾಲಯದ ಪ್ರಥಮ ಮತ್ತು ದ್ವಿತೀಯ ಘಟೀಕೋತ್ಸವದಲ್ಲಿ ಈ ಪದವಿ ನೀಡಲು ತೀರ್ಮಾನಿಸಲಾಗಿದೆ.

ಡಾ|| ಶಾಮನೂರು ಶಿವಶಂಕರಪ್ಪ ಅವರಿಗೆ ಕಲುಬುರಗಿಯ ಶರಣಬಸವ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ನೀಡುತ್ತಿರುವುದಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷ ಸೇರಿದಂತೆ ಸಾವಿರಾರು ಅಭಿಮಾನಿಗಳು ಅಭಿನಂದಿಸಿದ್ದಾರೆ.

ಡಾ|| ಶಾಮನೂರು ಶಿವಶಂಕರಪ್ಪನವರಿಗೆ 2008ರಲ್ಲಿ ಕುವೆಂಪು ವಿಶ್ವವಿದ್ಯಾಲಯವು, 2013ರಲ್ಲಿ ದಾವಣಗೆರೆ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿವೆ.
ಗುಲ್ಬರ್ಗಾದ ಶರಣಬಸವ ವಿಶ್ವವಿದ್ಯಾಲಯದ ಪ್ರಥಮ ಮತ್ತು ದ್ವಿತೀಯ ಘಟೀಕೋತ್ಸವದ ಸಮಾರಂಭವು ಯೂಟ್ಯೂಬ್ ಮುಖಾಂತರ ನೇರ ಪ್ರಸಾರವಾಗಲಿದೆ.

Leave a Reply

Your email address will not be published. Required fields are marked *

error: Content is protected !!