ಅಡುಗೆ ಮಾಡುವ ಹೆಣ್ಣುಮಗಳು ಮಂತ್ರಿಯಾಗಲು ಬಿಜೆಪಿಯಲ್ಲಿ ಮಾತ್ರ ಅವಕಾಶ – ಶಶಿಕಲಾ ಜೊಲ್ಲೆ

ಬೆಂಗಳೂರು: ಮನೆಯಲ್ಲಿ ಅಡುಗೆ ಮಾಡುವ ಹೆಣ್ಣು ಮಗಳು ರಾಜ್ಯದ ಮಂತ್ರಿಯಾಗಲು ಬಿಜೆಪಿ ಯಲ್ಲಿ ಮಾತ್ರ ಸಾಧ್ಯ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ.

ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಕಡಣಿಯಲ್ಲಿ ಮತ ಯಾಚನೆ ಮಾಡಿದರು.
ಬಿಜೆಪಿ ಪಕ್ಷದಲ್ಲಿ ಮಹಿಳೆಯರಿಗೆ ಸಾಕಷ್ಟು ಸ್ವಾಂತಂತ್ರ್ಯ ಇದೆ. ದೇಶದ ಜನಸಂಖ್ಯೆಯ ಅರ್ಧದಷ್ಟು ಮಹಿಳೆಯರಿದ್ದೇವೆ. ಮೊದಲು ತವರು ಮಹಿಳೆಯರು ತವರು ಮನೆಯಲ್ಲಿ ಅಪ್ಪ, ಅಣ್ಣ ಹೇಳಿದಂತೆ ಮದುವೆಯಾದ ಮೇಲೆ ಗಂಡ ಹೇಳಿದಂತೆ ಮತ ಚಲಾಯಿಸುತ್ತ ಬಂದಿದ್ದೇವೆ. ಆದರೆ, ನಮ್ಮ ಬೇಡಿಕೆ ಏನು ಎಂದು ಯಾರಿಗೂ ಕೇಳೋಲ್ಲ. ಆದರೆ, ಕೇಂದ್ರದಲ್ಲಿ ನಮ್ಮ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರಿಗೆ ಅಡುಗೆ ಮನೆಯಲ್ಲಿ ಕಟ್ಟಿಗೆಯಿಂದ ಅಡುಗೆ ಮಾಡುವ ತೊಂದರೆ ತಪ್ಪಿಸಲು ಉಜ್ವಲ ಯೋಜನೆ ಜಾರಿಗೆ ತಂದು ದೇಶಾದ್ಯಂತೆ ಸುಮಾರು 8 ಕೋಟಿ ಮನೆಗಳಿಗೆ ಅಡಿಗೆ ಅನಿಲ್ ಗ್ಯಾಸ್ ನೀಡುವ ಮೂಲಕ ಮಹಿಳೆಯರ ಕಣ್ಣೀರು ವರೆಸುವ ಕೆಲಸ ಮಾಡಿದ್ದಾರೆ. ಹೆಣ್ಣು ಮಕ್ಕಳ ರಕ್ಷಣೆಗೆ ಭೇಟಿ ಪಡಾವೊ ಭೇಟಿ ಪಡಾವೊ ಯೋಜನೆ ಜಾರಿಗೆ ತಂದಿದ್ದರೆ ಎಂದು ಹೇಳಿದರು.


ರಾಜ್ಯದ ಯಡಿಯೂರಪ್ಪ ನೇತೃತ್ಬದ ಸರ್ಕಾರ ರಾಜ್ಯದಲ್ಲಿ ಹುಟ್ಟಿದ ಪ್ರತಿಯೊಂದು ಹೆಣ್ಣು ಮಗುವನ್ನು ಭಾಗ್ಯಲಕ್ಷ್ಮಿ ಎಂದು ಕರೆದು ಹುಟ್ಟಿದ ಹೆಣ್ಣು ಮಗುವಿಗೆ ಭಾಗ್ಯಲಕ್ಷ್ಮೀ ಬಾಂಡ್ ನೀಡುವ ಯೋಜನೆ ಜಾರಿಗೆ ತಂದಿದ್ದಾರೆ.
ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತರ ಮಕ್ಕಳು ಉನ್ನತ ಶಿಕ್ಷಣ ಕಲಿಯಲು ಅನುಕೂಲವಾಗಲೆಂದು ವಿಧ್ಯಾನಿಧಿ ಯೋಜನೆ ಜಾರಿಗೆ ತಂದಿದ್ದಾರೆ.


ರೈತರಿಗೂ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕಿಸಾನ್ ಸಮ್ಮಾನ ಯೋಜನೆ ಮೂಲಕ ಪ್ರತಿಯೊಬ್ಬರ ರೈತರ ಖಾತೆಗಳಿಗೆ ನೇರವಾಗಿ ಹಣ ಬಿಡುತ್ತಾರೆ. ನಮ್ಮ ಮಾಜಿ ಯಡಿಯೂರಪ್ಪ ಅವರು ಅದಕ್ಕೆ 4000 ರೂ. ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.
ಸಿಂದಗಿಯಲ್ಲಿ ರಮೇಶ್ ಬೂಸನೂರು ಅವರನ್ನು ಈ ಚುನಾವಣೆಯಲ್ಲಿ ಆಯ್ಕೆ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಶಕ್ತಿ ಬಲಪಡಿಸುವಂತೆ ಸಚಿವರು ಮನವಿ ಮಾಡಿದರು.
ಇದಕ್ಕೂ ಮೊದಲು ಸಚಿವರು ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ಪೇಜ್ ಪ್ರಮುಖರ ಜೊತೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ವಸತಿ ಸಚಿವರಾದ ವಿ. ಸೋಮಣ್ಣ, ಶಾಸಕರಾದ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ಅವರು ಹಾಜರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!