ಮಾವಿನಕಟ್ಟೆಯಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ!
ದಾವಣಗೆರೆ : ಜೂನ್ 18 ರಂದು ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಸಬಾ ಹೋಬಳಿ ಮಾವಿನಕಟ್ಟೆ ಗ್ರಾಮದಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಂದಾಯ ಇಲಾಖೆಯ ವಿವಿಧ ಸೇವೆಗಳು ಹಾಗೂ ಯೋಜನೆಗಳಾದ ಪೌತಿ ಖಾತೆ ಬದಲಾವಣೆ, ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಸೌಲಭ್ಯ, ಅತಿವೃಷ್ಟಿ, ಬರ ಪರಿಹಾರ, ಪಡಿತರ ಚೀಟಿ, ಪಹಣಿ ಲೋಪದೋಷ ತಿದ್ದುಪಡಿ, ಸೇವಾ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಮತ್ತು ಈಗಾಗಲೇ ಸಾರ್ವಜನಿಕರಿಂದ ಸ್ವೀಕರಿಸಲಾಗಿರುವ ಅರ್ಜಿಗಳನ್ನು ಗ್ರಾಮ ವಾಸ್ತವ್ಯದಲ್ಲಿ ಇತ್ಯರ್ಥ ಪಡಿಸಲಾಗುವುದು.
ದಾವಣಗೆರೆ ತಾಲ್ಲೂಕು ಕಸಬಾ ಹೋಬಳಿಯ ಜರೀಕಟ್ಟೆ, ಹರಿಹರ ತಾಲ್ಲೂಕಿನ ಮಲೆಬೆನ್ನೂರು ಹೋಬಳಿಯ ಬೂದಿಹಾಳ್, ಜಗಳೂರು ತಾಲ್ಲೂಕಿನ ಸೊಕ್ಕೆ ಹೋಬಳಿಯ ಕ್ಯಾಸನಹಳ್ಳಿ, ನ್ಯಾಮತಿ ತಾಲ್ಲೂಕಿನ ಗೋವಿನಕೋವಿ ಹೋಬಳಿಯ ಗೋವಿನಕೋವಿ ಗ್ರಾಮಗಳಲ್ಲಿ ತಹಶೀಲ್ದಾರರುಗಳು ತಮ್ಮ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ಮಾಡುವರು. ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯ ಸಾಸ್ವೇಹಳ್ಳಿ-1 ಹೋಬಳಿಯ ಕ್ಯಾಸನಕೆರೆ ಗ್ರಾಮದಲ್ಲಿ ಜೂ.18 ರ ಶನಿವಾರದ ಬದಲಿಗೆ ಜೂ.19 ರ ಭಾನುವಾರದಂದು ಗ್ರಾಮ ವಾಸ್ತವ್ಯ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
garudavoice21@gmail.com 9740365719