ಶಿಕ್ಷಕರು ಪಠ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡುವಂತೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಸಲಹೆ

 

ದಾವಣಗೆರೆ: ಕರೋನಾ ಮಧ್ಯೆ ಮಕ್ಕಳ ಶಿಕ್ಷಣ ಕುಂಠಿತಗೊಂಡಿದ್ದು, ಶಿಕ್ಷಕರು ಪಠ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡುವಂತೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಸಲಹೆ ನೀಡಿದರು.

ನಗರದ ಕೆ.ಆರ್.ಮಾರುಕಟ್ಟೆ ಮತ್ತು ಮಾಜಿ ಪುರಸಭೆ ಸರ್ಕಾರಿ ಪ್ರೌಢಶಾಲೆಗಳಿಗೆ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕಳೆದ 2 ವರ್ಷಗಳಿಂದ ಕರೋನಾದಿಂದಾಗಿ ಮಕ್ಕಳ ಶಿಕ್ಷಣಕ್ಕೆ ಸಾಕಷ್ಟು ತೊಂದರೆ ಆಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವುದಲ್ಲದೇ ದೇಶದ ಉತ್ತಮ ಪ್ರಜೆಗಳನ್ನು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಬಿಇಓ ಕೊಟ್ರೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ‍್ಯದರ್ಶಿ ದಿನೇಶ್ ಕೆ.ಶೆಟ್ಟಿ, ಕೆ.ಆರ್.ಮಾರುಕಟ್ಟೆ ಮತ್ತು ಮಾಜಿ ಪುರಸಭೆ ಸರ್ಕಾರಿ ಪ್ರೌಢಶಾಲೆಗಳ ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಮತ್ತು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು, ಗುತ್ತಿಗೆದಾರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!