shiva rajkumar; ‘ಕಣ್ಣಪ್ಪ–ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಚಿತ್ರಕ್ಕೆ ಶಿವಣ್ಣ ಎಂಟ್ರಿ

ವಿಷ್ಣು ಮಂಚು ಅಭಿನಯದ ಮಹತ್ವಾಕಾಂಕ್ಷೆಯ ಚಿತ್ರವಾದ ‘ಕಣ್ಣಪ್ಪ – ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಕುರಿತು ಈಗಾಗಲೇ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳಿವೆ. ಅದಕ್ಕೆ ಒಂದು ಪ್ರಮುಖ ಕಾರಣ ಚಿತ್ರದ ತಾರಾಗಣ. ‘ಪ್ಯಾನ್‍ ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್‍ ಮತ್ತು ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಮೋಹನ್‍ ಲಾಲ್‍, ಈ ಚಿತ್ರದಲ್ಲಿ ನಟಿಸುತ್ತಿರುವುದು ಈಗಾಗಲೇ ಸುದ್ದಿಯಾಗಿದೆ. ಈಗ ನಮ್ಮ ಶಿವರಾಜಕುಮಾರ್ (Shiva rajkumar) ಸಹ ಈ ಚಿತ್ರಕ್ಕೆ ಸೇರ್ಪಡೆಯಾಗಿದ್ದಾರೆ.

ಶಿವರಾಜ್‍ಕುಮಾರ್ ಅವರಿಗೂ, ಕಣ್ಣಪ್ಪನಿಗೂ ಬಹಳ ಹಳೆಯ ನಂಟು. ಹಲವು ವರ್ಷಗಳ ಹಿಂದೆ ಶಿವರಾಜ್‍ಕುಮಾರ್ ಅವರು, ‘ಶಿವ ಮೆಚ್ಚಿದ ಕಣ್ಣಪ್ಪ’ ಚಿತ್ರದಲ್ಲಿ ಮೊದಲು ದಿಣ್ಣನಾಗಿ, ಆ ನಂತರ ಶಿವನ ಅನುಗ್ರಹಕ್ಕೆ ಪಾತ್ರವಾಗುವ ಕಣ್ಣಪ್ಪನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಅದೇ ಪಾತ್ರವನ್ನು ತೆಲುಗಿನಲ್ಲಿ ವಿಷ್ಣು ಮಂಚು ಮಾಡುತ್ತಿದ್ದಾರೆ ಎನ್ನುವುದು ವಿಶೇಷ.

Fighter; ಯಶಸ್ಸಿನ ಹಾದಿಯಲ್ಲಿ ವಿನೋದ್ ಪ್ರಭಾಕರ್ ಅಭಿನಯದ “ಫೈಟರ್”

‘ಕಣ್ಣಪ್ಪ’ ಚಿತ್ರದಲ್ಲಿ ಶಿವರಾಜ್‍ಕುಮಾರ್ ಅವರ ಪಾತ್ರವೇನು? ಎಂಬ ವಿಷಯವನ್ನು ಚಿತ್ರತಂಡ ಸದ್ಯಕ್ಕೆ ರಹಸ್ಯವಾಗಿಟ್ಟಿದೆ. ಆದರೆ, ಶಿವಣ್ಣ ಅವರ ಪಾತ್ರ ಇಡೀ ಚಿತ್ರದ ಹೈಲೈಟ್‍ ಆಗಲಿದ್ದು, ಅಭಿಮಾನಿಗಳಿಗೆ ಬಹಳ ಇಷ್ಟವಾಗಲಿದೆ ಎಂಬುದು ಚಿತ್ರತಂಡದ ಅಭಿಪ್ರಾಯ.

ಈ ಹಿಂದೆ ಸ್ಟಾರ್ ಪ್ಲಸ್‍ ವಾಹಿನಿಗಾಗಿ ‘ಮಹಾಭಾರತ’ ಸರಣಿಯನ್ನು ನಿರ್ದೇಶಿಸಿದ್ದ ಮುಕೇಶ್‍ ಕುಮಾರ್ ‍ಸಿಂಗ್‍, ಈ ಪೌರಾಣಿಕ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಹಿರಿಯ ನಟ ಮತ್ತು ನಿರ್ಮಾಪಕ ಡಾ. ಮೋಹನ್‍ ಬಾಬು ನಿರ್ಮಿಸುತ್ತಿರುವ ಶಿವನ ಅಚಲ ಭಕ್ತನಾದ ಕಣ್ಣಪ್ಪನ ಕಾಲಾತೀತ ಕಥೆಯ ಚಿತ್ರೀಕರಣ ಈಗಾಗಲೇ ನ್ಯೂಜಿಲ್ಯಾಂಡ್‍ನಲ್ಲಿ ಪ್ರಾರಂಭವಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!