ಶಿವಮೊಗ್ಗದ ಗೋವಿನ ಪುರ, ವಿರುಪಿನ ಕೊಪ್ಪ ದಲ್ಲಿನ ಮೂಲಭೂತ ಸೌಕರ್ಯ ಕುರಿತು ಸಚಿವದ್ವಯರ ಚರ್ಚೆ
ಬೆಂಗಳೂರು: ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು ಸಭೆ ನಡೆಸಿ ಚರ್ಚೆ ನಡೆಸಿದರು.
ಶಿವಮೊಗ್ಗದ ಗೋವಿನ ಪುರ, ವಿರುಪಿನ ಕೊಪ್ಪ ದಲ್ಲಿನ ಆಶ್ರಯ ಮನೆಗಳಿಗೆ ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಮೇಯರ್ ಸುನೀತಾ ಅಣ್ಣಪ್ಪ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ ಎಂ.ಎನ್ ಸೇರಿದಂತೆ ಹಲವು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.