ಸುದ್ದಿ ಕ್ಷಣ

14 ತಿಂಗಳ ನಂತರ ಜೈಲಿನಿಂದ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ಬಿಡುಗಡೆ

Shivamurthy Swami of Muruga Math released from jail after 13 months
Shivamurthy Swami of Muruga Math released from jail after 14 months

ಚಿತ್ರದುರ್ಗ: ನಗರದ ಹೊರವಲಯದಲ್ಲಿರುವ ಮುರುಘಾ ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಶ್ರೀ ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ.

ಕಳೆದ 13 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಕಾರಾಗೃಹದಿಂದ ಹೊರಬಂದ ಶರಣರು ಭಕ್ತರ ಕಾರಿನಲ್ಲಿ ಪ್ರಯಾಣ ಬೆಳೆಸಿದರು. ಬಿಡುಗಡೆ ಬಳಿಕ ಚಿತ್ರದುರ್ಗ ಜಿಲ್ಲೆ ಪ್ರವೇಶ ಮಾಡದಂತೆ ಹೈಕೋರ್ಟ್ ಷರತ್ತು ವಿಧಿಸಿದ್ದರಿಂದ ದಾವಣಗೆರೆಯತ್ತ ತೆರಳಿದರು ಎನ್ನಲಾಗಿದೆ.

ಮುರುಘಾ ಶ್ರೀ ವಿರುದ್ಧ ಎರಡು ಪೋಕ್ಸೋ ಪ್ರಕರಣ ದಾಖಲಾಗಿತ್ತು. ನ.8 ರಂದು ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದರೂ ಎರಡನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಬಾಕಿಯಿದ್ದ ಹಿನ್ನೆಲೆಯಲ್ಲಿ ಬಿಡುಗಡೆಯಾಗಿರಲಿಲ್ಲ.  ಈ ಪ್ರಕರಣದ ವಿಚಾರಣೆ ಇಂದು ಮಧ್ಯಾಹ್ನ ನಡೆಯಲಿದೆ.

ಜಾಮೀನು ಆದೇಶ ನೀಡುವ ಚಿತ್ರದುರ್ಗದಲ್ಲಿ ನೆಲೆಸುವಂತಿಲ್ಲ ಎಂದು ಕೋರ್ಟ್‌ ಷರತ್ತು ವಿಧಿಸಿದ ಹಿನ್ನಲೆಯಲ್ಲಿ ಶ್ರೀಗಳು ಜೈಲಿನಿಂದ ಬಿಡುಗಡೆಯಾದ ಬಳಿಕ  ದಾವಣಗೆರೆ ಕಡೆ ಹೊರಟಿದ್ದಾರೆ. ವಿಚಾರಣೆ ಮುಗಿಯುವವರೆಗೂ ಚಿತ್ರದುರ್ಗಕ್ಕೆ ಹೋಗುವಂತಿಲ್ಲ. ಇಬ್ಬರ ಶ್ಯೂರಿಟಿಯನ್ನು ಒದಗಿಸಬೇಕು. ವೀಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ಎರಡು ಲಕ್ಷ ರೂ. ಬಾಂಡ್ ಶ್ಯೂರಿಟಿ ನೀಡಬೇಕು. ಪಾಸ್‌ಪೋರ್ಟ್‌  ಕೋರ್ಟ್‌ ವಶಕ್ಕೆ ನೀಡಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂತಹ ಕೃತ್ಯ ಪುನರಾವರ್ತನೆಯಾಗಬಾರದು ಎಂದು ಷರತ್ತು ವಿಧಿಸಿದೆ.

Shivamurthy Swami of Muruga Math released from jail after 14 months

ಇಬ್ಬರು ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ದಾಖಲಾದ ಪ್ರಕರಣದಲ್ಲಿ ಶಿವಮೂರ್ತಿ ಶರಣರಿಗೆ ಹೈಕೋರ್ಟ್ ನ.8ರಂದು ಜಾಮೀನು ನೀಡಿತ್ತು. ಜಾಮೀನು ಆದೇಶದ ಮೇರೆಗೆ ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಬಿಡುಗಡೆ ಆದೇಶ ಹೊರಡಿಸಿತ್ತು. ಈ ಆದೇಶ ಕಾರಗೃಹ ತಲುಪುವುದು ವಿಳಂಬವಾಗಿದ್ದರಿಂದ ಬುಧವಾರ ಬಿಡುಗಡೆ ಆಗಿರಲಿಲ್ಲ.

ಅಕ್ಟೋಬರ್ 13 ರಂದು ಮಠಾಧೀಶರು ಪೋಕ್ಸೋ ಪ್ರಕರಣದಲ್ಲಿ ಆರೋಪಿ ನಂಬರ್ 3 ಪರಮಶಿವಯ್ಯ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

‘ಒಡನಾಡಿ ಸೇವಾ ಸಂಸ್ಥೆ’  ಮಠಾಧೀಶರು ಮತ್ತು ಇತರ ನಾಲ್ವರ ವಿರುದ್ಧ ಮೈಸೂರು ಮೂಲದ ಎನ್‌ಜಿಒ ದೂರು ದಾಖಲಿಸಿದ್ದು,  ಶಾಲೆಯಲ್ಲಿ ಓದುತ್ತಿರುವ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮತ್ತು ಅದರ ಹಾಸ್ಟೆಲ್‌ನಲ್ಲಿ ವಾಸಿಸುವವರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದೆ.

ಮೈಸೂರಿನ ನಜರಾಬಾದ್ ಪೊಲೀಸರು ಪೋಕ್ಸೊ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ನಂತರ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿತ್ತು.ಆರೋಪಿಗಳನ್ನು ಬಂಧಿಸಲಾಗಿದ್ದು,  ಆರೋಪಿಗಳು ಅಂದಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನಿಬ್ಬರು ವಿದ್ಯಾರ್ಥಿಗಳು ದೂರು ನೀಡಿದ ನಂತರ ಎರಡನೇ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!