ಶಿವರಾಜ್ ಸಜ್ಜನ್ ರಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಬೇಸರವಿಲ್ಲ – ಸಂಸದ ಶಿವಕುಮಾರ್ ಉದಾಸಿ

ದಾವಣಗೆರೆ: ಪಕ್ಷ ಟಿಕೆಟ್ ನೀಡಿದೆ ಅವರ ಪರವಾಗಿ ಕೆಲಸ ಮಾಡುತ್ತೇನೆ
ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ್ ಗೆಲುವು ಖಚಿತ ಎಂಬ ವಿಶ್ವಾಸವನನ್ನು ಹಾವೇರಿ ಲೋಕಸಭಾ ಸದಸ್ಯ ಶಿವಕುಮಾರ್ ಉದಾಸಿ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಶಿವಕುಮಾರ್ ಉದಾಸಿ ನಮ್ಮ ಅಭ್ಯರ್ಥಿ ಈಗಾಗಲೇ ನಾಮಪತ್ರ ಸಲ್ಲಿಸಿ ಕ್ಷೇತ್ರದಲ್ಲಿ ಬಿರುಸಿನಿಂದ ಪ್ರಚಾರ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ 42 ಗ್ರಾಮಪಂಚಾಯತ್ ಗಳಿದ್ದು, ಈಗಾಗಲೇ 24 ಗ್ರಾಮಪಂಚಾಯತ್ ಗಳಲ್ಲಿ ಪ್ರಚಾರ ಮಾಡಲಾಗಿದೆ. ಶಿವರಾಜ್ ಸಜ್ಜನ್ ಮತ್ತು ನಾನು ಇಬ್ಬರು ಒಟ್ಟುಗೂಡಿ ಪ್ರಚಾರ ಮಾಡಿದ್ದೇವೆ. ನಮ್ಮ ಅಭ್ಯರ್ಥಿ ಹಾನಗಲ್ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸದ ನುಡಿಗಳನ್ನು ಹೇಳಿದ್ದಾರೆ. ನಮ್ಮ ಕಾರ್ಯಕರ್ತರದಲ್ಲಿ ಉತ್ಸಾಹವಿದೆ ನಮ್ಮ ಅಭ್ಯರ್ಥಿ ಗೆಲುವು ಖಚಿತ ಎಂದು ಹೇಳಿದ್ದಾರೆ.

ಈ ಹಿಂದೆ ಶಿವಕುಮಾರ್ ಉದಾಸಿ ತಮ್ಮವರಿಗೆ ಟಿಕೆಟ್ ಸಿಗುತ್ತೇ ಎಂಬ ಹೇಳಿಕೆ ನೀಡಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಉದಾಸಿ, ಆ ರೀತಿ ಏನು ಇಲ್ಲ, ನಾವು ಬಿಜೆಪಿ ಪಕ್ಷದವರು, ನಮ್ಮ ಪಕ್ಷ ಯಾರಿಗೆ ಟಿಕೆಟ್ ನೀಡತ್ತೇ ಆ ಅಭ್ಯರ್ಥಿ ಪರ ಪ್ರಚಾರ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಸಿ. ಎಂ. ಉದಾಸಿ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಯಡಿಯೂರಪ್ಪನವರು ಸಾಕಷ್ಟು ಕೊಡಿಗೆಗಳನ್ನು ನೀಡಿದ್ದಾರೆ. ಇವೆಲ್ಲವೂ ನಮಗೆ ಪೂರಕವಾಗಲಿದೆ ಎಂದರು.

ದಾವಣಗೆರೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನಿನ್ನೆ ಬಂದಿದ್ದು, ಅವರ ಜೊತೆ ಚರ್ಚೆ ಮಾಡಿದ್ದೇವೆ. ಚುನಾವಣೆ ಕುರಿತು ಅಷ್ಟೇ ಚರ್ಚೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!