ಜಿಲ್ಲಾ ಕಾಂಗ್ರೆಸ್‍ನಿಂದ ಶ್ರದ್ಧಾಂಜಲಿ: ಬಿಪಿಎನ್ ರಾವತ್ ನಿಧನ ರಾಷ್ಟ್ರಕ್ಕೆ ತುಂಬಲಾರದ ನಷ್ಟ – ಎಸ್ ಎಸ್
ದಾವಣಗೆರೆ: ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಹುತಾತ್ಮರಾದ ಜನರಲ್ ಬಿಪಿನ್ ರಾವತ್ ಮತ್ತು ರಕ್ಷಣಾಧಿಕಾರಿಗಳ ತಂಡಕ್ಕೆ ಜಿಲ್ಲಾ ಕಾಂಗ್ರೆಸ್ ನಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಗರದ ರಾಂ ಅಂಡ್ ಕೋ ವೃತ್ತದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಹುತಾತ್ಮರಾದ ಜನರಲ್ ಬಿಪಿನ್ ರಾವತ್, ಅವರ ಪತ್ನಿ, ಹಿರಿಯ ರಕ್ಷಣಾ ಅಧಿಕಾರಿಗಳಾದ ವಿಂಗ್ ಕಮಾಂಡರ್ ಪೃಥ್ವಿ ಸಿಂಗ್ ಚೌಹಾಣ್, ಸ್ಕ್ವಾಡ್ರನ್ ಲೀಡರ್ ಕುಲದೀಪ್ ಸಿಂಗ್, ಜೂನಿಯರ್ ವಾರಂಟ್ ಅಧಿಕಾರಿ ರಾಣಾ ಪ್ರತಾಪ್ ದಾಸ್, ಕಿರಿಯ ವಾರಂಟ್ ಅಧಿಕಾರಿ ಅರಕ್ಕಲ್ ಪ್ರದೀಪ್, ಹವಾಲ್ದಾರ್ ಸತ್ಪಾಲ್ ರೈ, ನಾಯಕ್ ಗುರುಸೇವಕ್ ಸಿಂಗ್, ನಾಯಕ್ ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜಾ. ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನಕ್ಕೆ ಪಕ್ಷದ ಕಾರ್ಯಕರ್ತರು ಮೌನಾಚರಿಸಿ ಶ್ರದ್ಧಾಂಜಲಿ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಶಾಸಕ ಶಾಮನೂರು ಶಿವಶಂಕರಪ್ಪ, ಭಾರತೀಯ ಸೇನೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾಧಿಕಾರಿಗಳ ಸಾವು ರಾಷ್ಟ್ರಕ್ಕೆ ತುಂಬಲಾರದ ನಷ್ಟ ಎಂದು ವಿಷಾದಿಸಿದರು.
ಬಿಪಿಎನ್ ರಾವತ್ ಅವರು ತಮ್ಮ ಸೇವೆಯಲ್ಲಿ ಅನೇಕ ಯುದ್ಧಗಳನ್ನು ಮುನ್ನಡೆಸಿ ಚೀನಾ, ಪಾಕಿಸ್ತಾನದಂತಹ ಶತ್ರು ರಾಷ್ಟ್ರಗಳಿಗೆ ಸಿಂಹಸ್ವಪ್ನವಾಗಿದ್ದರು. ದೇಶದ ಸೇನಾ ಪಡೆಗಳನ್ನು ಆಧುನಿಕಗೊಳಿಸಿ ರಾಷ್ಟ್ರ ರಕ್ಷಣೆಗೆ ತಮ್ಮ ಜೀವವನ್ನೆ ಪಣಕ್ಕಿಟ್ಟಿದ್ದರು. ಕೊನೆಗೆ ರಾಷ್ಟ್ರ ರಕ್ಷಣೆಗಾಗಿಯೇ ತಮ್ಮ ಪ್ರಾಣವನ್ನರ್ಪಿಸಿದರು ಎಂದು ಹೇಳಿದರು.
ಬಿಪಿಎನ್ ರಾವತ್ ಅವರಂತಹ ದೇಶ ರಕ್ಷಕರು ಅಗತ್ಯವಿದೆ. ಇಂತಹ ಬಿಪಿನ್ ರಾವತ್ ಅವರು ಮತ್ತೆ ರಾಷ್ಟ್ರ ರಕ್ಷಣೆಗೆ ಹುಟ್ಟಿ ಬರಲಿ ಎಂದು ಆಶಿಸಿದರು.ಜನರಲ್ ಬಿಪಿನ್ ರಾವತ್ ಮತ್ತವರ ಕುಟುಂಬ ಹಾಗೂ ನಿಧನ ಹೊಂದಿರುವ ಹಿರಿಯ ರಕ್ಷಣಾ ಅಧಿಕಾರಿಗಳ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಕೆ.ಶೆಟ್ಟಿ, ಎಸ್.ಮಲ್ಲಿಕಾರ್ಜುನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶಿವಕುಮಾರ್, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಉಮಾಶಂಕರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಅನಿತಾಬಾಯಿ ಮಾಲತೇಶ್, ನಾಗರತ್ನಮ್ಮ, ಆಶಾ ಮುರುಳಿ, ಮಂಗಳಮ್ಮ, ಕವಿತಾ ಚಂದ್ರಶೇಖರ್, ಗೀತಾ ಪ್ರಶಾಂತ್, ದ್ರಾಕ್ಷಾಯಣಮ್ಮ, ರಾಜೇಶ್ವರಿ, ಉಮಾ ಕುಮಾರ್, ಅಧ್ಯಕ್ಷ ಹೆಚ್.ಗುರುರಾಜ್, ವಕೀಲರ ಘಟಕದ ಅಧ್ಯಕ್ಷ ಪ್ರಕಾಶ್ ಪಾಟೀಲ್, ಎನ್.ಎಂ.ಆಂಜನೇಯ ಗುರೂಜಿ, ಸಿದ್ದೇಶ್, ಸಾಮಾಜಿಕ ಜಾಲತಾಣದ ಹರೀಶ್ ಕೆ.ಎಲ್. ಬಸಾಪುರ, ಯುವರಾಜ್ ಮತ್ತಿತರರಿದ್ದರು.