ಡಿಕೆ ಶಿವಕುಮಾರ್‌ ಸಿಎಂ ಆಗ್ತಾರೆ – ಶಿವ ಯೋಗೇಶ್ವರ ಸ್ವಾಮೀಜಿ ಭವಿಷ್ಯ

shri-shiva-yogeshwara-swamiji-says-dk-shivakumar-will-be-the-chief-minister

ಮಂಡ್ಯ: ಡಿ.ಕೆ ಶಿವಕುಮಾರ್‌ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗ್ತಾರೆ, ಅದಕ್ಕೆ ಎಲ್ಲಾ ಅವಕಾಶಗಳಿವೆ ಎಂದು ಶ್ರೀ ಕರಿವೃಷಭ ದೇಶಿಕೇಂದ್ರ ಶಿವ ಯೋಗೇಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಮಂಡ್ಯದ ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ನಡೆದ ಶ್ರೀ ಪಟ್ಟಲದಮ್ಮ ದೇವಿಯ ದೀಪೋತ್ಸವ ಕಾರ್ಯಕ್ರಮದಲ್ಲಿ ಸ್ವಾಮೀಜಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್‌ ರಾಜ್ಯದ ಸಿಎಂ ಆಗ್ತಾರೆ ಎಂದು ಹೇಳಿದ್ದಾರೆ.

ಸರ್ಕಾರ ಸಿಎಂ ಆಯ್ಕೆ ಮಾಡುವ ವಿಚಾರದಲ್ಲಿ ಮೀಸಲಾತಿ ಪ್ರಕಟಿಸುವುದು ಉತ್ತಮ ಅದು ಎಲ್ಲರಿಗೂ ಅನುಕೂಲವಾಗಲಿದೆ. ಎಲ್ಲಾ ಸಮುದಾಯಗಳು ಇನ್ನಷ್ಟು ಹೆಚ್ಚಾಗಿ ಸಂಘಟನೆಯಲ್ಲಿ ಬೆಳೆಯುವವರೆಗೆ ರಾಜಕೀಯದಲ್ಲಿಯೂ ಮೀಸಲಾತಿ ಕೊಟ್ಟು ಮುಂದುವರಿಯುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಇದೆ. ಶ್ರೀಮಠದ ಪರಮ ಭಕ್ತರಾಗಿದ್ದಾರೆ, ಅವರು ಮುಖ್ಯಮಂತ್ರಿ ಆಗಲಿ ಎಂಬುದು ನಮ್ಮ ಸಂಕಲ್ಪ ಕೂಡ ಆಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಮತ್ತೆ ಸಿಎಂ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.

ಇತ್ತೀಚೆಗಷ್ಟೇ ಮದ್ದೂರು ಶಾಸಕ‌ ಕದಲೂರು ಉದಯ್, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಸಹ ಡಿಕೆಶಿ ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!