siddaramaiah; ‘ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ದೇಶಕ್ಕೆ ಲಾಭ ಇಲ್ಲ’

ಬೆಂಗಳೂರು. ಆ.25: ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ನುಡಿದರು.

ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ.ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡಿ ದೇಶ ಪರಿತಪಿಸುವಂತಾಗಿದೆ ಎಂದರು.

application; 45 ದಿನಗಳ ಕೈಮಗ್ಗ ನೇಯ್ಗೆ ತರಬೇತಿಗಾಗಿ ಅರ್ಜಿ ಅಹ್ವಾನ

ಈ ಕಾರಣಕ್ಕೆ ನಮ್ಮ ಸರ್ಕಾರ ತಿಮ್ಮ-ಬೋರ-ಕಾಳನ ಶ್ರಮಿಕ ವರ್ಗದ ಜೇಬಿಗೆ ಹಣ ಹಾಕುವ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ ಎಂದು ವಿವರಿಸಿದರು.

ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ ? ಅಂಬಾನಿ-ಅದಾನಿಯವರ ಜೇಬು ತುಂಬಿಸುವವರ ಕೈಗೆ ಕೇಂದ್ರದಲ್ಲಿ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗಬೇಕು ಎಂದರೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

vachana; ಮಾನವೀಯ ಮೌಲ್ಯಗಳು ಕಳಚಿ ಹೋಗ್ತಾ ಇದೆ: ಶಿವಾಚಾರ್ಯ ಸ್ವಾಮಿಗಳು

ಸಿದ್ದಲಿಂಗಯ್ಯ ಅವರ ಆಶಯಗಳನ್ನು ಬದುಕಿನಲ್ಲಿ ಇಟ್ಟುಕೊಂಡವರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟು ಯಾರಿಗೆ ಬಂತು, ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ ಎಂದು ಪ್ರಶ್ನಿಸಿದರೆ ಹೇಗೆ ಎಂದು ಸಭಿಕರನ್ನು ಪ್ರಶ್ನಿಸಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!