‘ಗೋ ಬ್ಯಾಕ್ ಅಮುಲ್’ ಅಭಿಯಾನಕ್ಕೆ ದನಿಗೂಡಿಸಿದ ಸಿದ್ಧರಾಮಯ್ಯ
ಬೆಂಗಳೂರು: ಕ್ವಿಕ್ ಕಾರ್ಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಗುರುವಾರದಿಂದ ಮನೆಗಳಿಗೆ ತಲುಪಿಸಲು ಹೊರಟಿದೆ. ಈ ಬಗ್ಗೆ ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, . ‘ಗೋ ಬ್ಯಾಕ್ ಅಮುಲ್’ ಅಭಿಯಾನ ಆರಂಭಿಸುವ ಎಚ್ಚರಿಕೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಈ ಹೋರಾಟಕ್ಕೆ ಧನಿಗೂಡಿಸಿದ್ದಾರೆ.
ರಾಜ್ಯ ಬಿಜೆಪಿಯ ದುರ್ಬಲ ನಾಯಕತ್ವದಿಂದಾಗಿ ನಾಡಿನ ಲಕ್ಷಾಂತರ ಹೈನುಗಾರಿಕೆ ಕುಟುಂಬಗಳ ಜೀವನಾಧಾರವಾಗಿರುವ ಕೆಎಂಎಫ್ ಅನ್ನು ಬಲಿಪಡೆಯುವ ಎಲ್ಲಾ ರೀತಿಯ ಪ್ರಯತ್ನಗಳು ಆರಂಭವಾಗಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ನೇರ ಕಾರಣ ಎಂದು ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ಕಿಡಿಕಾರಿದ್ದಾರೆ.
ಅಮುಲ್ ಐಸ್‌ಕ್ರೀಮ್ ಸೇರಿ ಹಲವು ಉತ್ಪನ್ನಗಳನ್ನು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಅಮುಲ್, ಈಗ ಹಾಲು ಮತ್ತು ಮೊಸರನ್ನು ಮಾರುಕಟ್ಟೆಗೆ ಇಳಿಸಲು ಮುಂದಾಗಿದೆ.