ಶಾಮನೂರಿನಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿದ ಸಿದ್ಧರಾಮಯ್ಯ

ಶಾಮನೂರಿನಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿದ ಸಿದ್ಧರಾಮಯ್ಯ

ದಾವಣಗೆರೆ : ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಶಾಮನೂರಿನ ಮನೆಗಳಿಗೆ ತೆರಳಿ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಿದರು.

ಇದಕ್ಕೂ ಮುನ್ನ ಅವರು ಶಾಮನೂರು ಆಂಜನೇಯ ದೇವಸ್ಥಾನ, ಈಶ್ವರ ದೇವಸ್ಥಾನ, ದುರ್ಗಮ್ಮ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು. ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

200 ಯುನಿಟ್‌ ವಿದ್ಯುತ್‌ ಉಚಿತ, ಮನೆ ಯಜಮಾನಿಗೆ ತಿಂಗಳಿಗೆ 2000, 10 ಕೆಜಿ ಅಕ್ಕಿ ನೀಡುವ ಗ್ಯಾರಂಟಿ ಕಾರ್ಡ್‌ಗಳನ್ನು ಮನೆಗಳಿಗೆ ಹಂಚಿ, ನಮ್ಮ ಪಕ್ಷವನ್ನು ಅಧಿಕಾರಕ್ಕೆ ತನ್ನಿ. ಇದೆಲ್ಲ ನಿಮಗೆ ನಾವು ಕೊಡುತ್ತೇವೆ ಎಂದು ಭರವಸೆ ನೀಡಿದರು.

ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮೈಸೂರು ದಶಪಥ ಹೆದ್ದಾರಿ ಇನ್ನೂ ಪೂರ್ತಿಯಾಗಿಲ್ಲ. ಸರ್ವಿಸ್‌ ರಸ್ತೆಯಾಗದೇ ಟೋಲ್‌ ಸಂಗ್ರಹಿಸುಂತಿಲ್ಲ. ಬೈಪಾಸ್‌ ಆಗಿಲ್ಲ. ಅಂಡರ್‌ಪಾಸ್‌ ನಿರ್ಮಾಣ ಮಾಡಿಲ್ಲ. ಇನ್ನೂ ಅನೇಕ ಕೆಲಸಗಳು ಬಾಕಿ ಉಳಿದಿವೆ. ಚುನಾವಣೆ ಹತ್ತಿರ ಬಂತೆಂದು ತರಾರುತಿಯಲ್ಲಿ ಪ್ರಧಾನಿಯವರನ್ನು ಕರೆಸಿ ಉದ್ಘಾಟನೆ ಮಾಡಲಾಗಿದೆ ಎಂದು ಆರೋಪಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಶಾಸಕ ಜಮೀರ್‌ ಅಹ್ಮದ್‌, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಎಚ್‌.ಬಿ. ಮಂಜಪ್ಪ ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!