ಪಾಕ್‌ಪರ ಘೋಷಣೆ: ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ಆಗ್ರಹ

ಪಾಕ್‌ಪರ ಘೋಷಣೆ

ದಾವಣಗೆರೆ: ಪಾಕಿಸ್ತಾನದ ಪರ ಘೋಷಣೆ ಕೂಗಿದವರ ಮೇಲೆ ಶೀಘ್ರವೇ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿಗಳು ಗೌರವಯುತವಾಗಿ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ವಿಧಾನಸೌಧದ ಆವರಣದಲ್ಲಿಯೇ ಶತ್ರ ದೇಶದ ಪರ ಘೋಷಣೆ ಕೂಗಿರುವ ಘಟನೆ ನಡೆದಿರುವುದೇ ಇದಕ್ಕೆ ಸಾಕ್ಷಿ ಎಂದು ಆರೋಪಿಸಿದರು.
ಕಾಂಗ್ರೆಸ್ ಎಂದಿದಿಗೂ ದೇಶ ದ್ರೋಹಿಗಳ ಪರವಾಗಿಯೇ ಇದು. ಕಾಂಗ್ರೆಸ್ ಪಕ್ಷದ್ದು ಜಿನ್ನಾ ಮನಸ್ಥಿತಿಯಾಗಿದೆ ಎಂದು ದೂರಿದರು.
ಕೇವಲ ಅಲ್ಪಸಂಖ್ಯಾತರ ಔಲೇಕೆ ರಾಜಕಾರಣ ಮಾಡುತ್ತಾ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಹುಬ್ಬಳ್ಳಿಯಲ್ಲಿ ಕರ ಸೇವಕರ ಮೇಲೆ ಸುಳ್ಳು ಕೇಸು ದಾಖಲಿಸಿ ಜೈಲಿಗೆ ಕಳುಹಿಸಿದ್ದು ಇದಕ್ಕೆ ಉದಾಹರಣೆಯಾಗಿದೆ ಎಂದರು.
ವಿದ್ಯುತ್, ಹಾಲು, ಅಬಕಾರಿ ಸುಂಕ, ಆಸ್ತಿ ನೋಂದಣಿ ದರ ಹೆಚ್ಚಸಿರುವುದು ಕಾಂಗ್ರೆಸ್ ಸರ್ಕಾರದ ಮಹತ್ತರ ಸಾಧನೆಯಾಗಿದೆ. ಇದರಿಂದಾಗಿ ಜನರು ಪರಿತಪಿಸುವಂತಾಗಿದೆ ಎಂದರು.
ಎಸ್ಸಿ-ಎಸ್ಟಿಗೆ ಸೇರಿದ 11 ಕೋಟಿ ರೂ.ಗೂ ಹೆಚ್ಚು ಹಣವನ್ನು ಗ್ಯಾರಂಟಿ ಉದ್ದೇಶಗಳಿಗೆ ಬಳಸಿಕೊಂಡು ಶೋಷಿತ, ತಳ ಸಮುದಾಯದ ಜನರಿಗೆ ಅನ್ಯಾಯ ಮಾಡಲಾಗಿದೆ. ಇದು ದಲಿತ ವಿರೋಧಿ ಸರ್ಕಾರ. ರಾಜ್ಯದ ಖಜಾನೆ ಖಾಲಿಯಾಗಿದ್ದು, ಇದೊಂದು ಶೂನ್ಯ ಅಭಿವೃದ್ಧಿ ಸರ್ಕಾರ ಎಂದರು.
ಸುದ್ದಿಗೋಷ್ಠಿಯಲ್ಲಿ ಸತೀಶ್ ಕೊಳೇನಹಳ್ಳಿ, ಶಿವರಾಜ್ ಪಾಟೀಲ್, ಐಗೂರು ಲಿಂಗರಾಜ್, ಧನಂಜಯ ಕಡ್ಲೇಬಾಳು, ಅನಿಲ್ ಕುಮಾರ್ ನಾಯಕ್, ಜಿ.ಕೊಟ್ರೇಶ್ ಗೌಡ, ಹೆಚ್.ಪಿ. ವಿಶ್ವಾಸ್, ಶಶಿಕುಮಾರ್ ಇತರರಿದ್ದರು.

Leave a Reply

Your email address will not be published. Required fields are marked *

error: Content is protected !!