ಸಿದ್ದರಾಮಯ್ಯ ಸರ್ಕಾರದಿಂದ ಎಸ್ ಟಿ ಪಂಗಡಕ್ಕೆ ಕುರುಬ ಸಮುದಾಯವನ್ನು ಸೇರಿಸುವಂತೆ ಕೇಂದ್ರಕ್ಕೆ ಶಿಪಾರಸ್ಸು ಪತ್ರ

ಬೆಂಗಳೂರು: ರಾಜ್ಯಾದ್ಯಂತ ಇರುವ ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರದಿ ಶಿಫಾರಸು ಮಾಡಲಾಗಿದೆ.
ರಾಜ್ಯ ಸರ್ಕಾರದ ಕಾರ್ಯದರ್ಶಿಯಿಂದ ಕೇಂದ್ರ ಸರ್ಕಾರಕ್ಕೆ ಪತ್ರವನ್ನ ಬರೆಯಲಾಗಿದ್ದು, ಮೈಸೂರು, ಚಾಮರಾಜನಗರ ಜಿಲ್ಲೆಯ ಕೆಲ ಏರಿಯಾಗಳಲ್ಲಿ ಇದ್ದ ಕಾಡು ಕುರುಬರನ್ನ ಮಾತ್ರ ಎಸ್ಟಿ, ಪಂಗಡಕ್ಕೆ ಸೇರಿಸಲಾಗಿತ್ತು, ಈಗ ರಾಜ್ಯಾದ್ಯಂತ ಇರುವ ಕುರುಬ ಸಮುದಾಯವನ್ನ ಎಸ್ಟಿಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸು ಪತ್ರವನ್ನು ಬರೆಯಲಾಗಿದೆ.
ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ಎಸ್ ಟಿ ಸಮುದಾಯಕ್ಕೆ ಕುರುಬ ಸಮುದಾಯವನ್ನು ಸೇರಿಸಬೇಕು ಎಂದು ಲಕ್ಷಾಂತರ ಜನರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.