Siddaramaiah; ಸಿದ್ದರಾಮಯ್ಯ ಮಾಜಿ ಪ್ರಧಾನಿ ದೇವೇಗೌಡರ ಅನಿರೀಕ್ಷಿತ ಭೇಟಿ

ಬೆಂಗಳೂರು, ಅ.9: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿಯಾದರು.

CWC ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ , ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು.

Lingayat: ಒಬ್ಬರ ತಲೆ ಮೇಲೆ ಒಬ್ಬರು ಕೂರುವ ವ್ಯವಸ್ಥೆ ಅಳಿಸಿ: ಸಿದ್ದರಾಮಯ್ಯ ಕರೆ

ಈ ವೇಳೆ ಮುಖ್ಯಮಂತ್ರಿಗಳು ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು.‌ ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು.

ಕೆಲ ಕಾಲ ಕುಶಲೋಪರಿ, ಮಾತುಕತೆ ಬಳಿಕ ಪರಸ್ಪರರು ಬೀಳ್ಕೊಟ್ಟರು. ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!