Siddaramaiah; ಪೂರ್ಣಿಮಾರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ: ಸಿಎಂ

ಬೆಂಗಳೂರು, ಅ.20: ಪೂರ್ಣಿಮಾ ಮತ್ತು ಶ್ರೀನಿವಾಸ್ ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿ ಯಲ್ಲಿದ್ದರು. ಈಗ ಕಾಂಗ್ರೆಸ್ ಗೆ ಬಂದಿದ್ದಾರೆ. ಇವರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ (Siddaramaiah) ಅಭಯ ನೀಡಿದರು.

ಅತ್ಯಂತ ಹಿಂದುಳಿದ ವರ್ಗ ಗೊಲ್ಲ ಸಮುದಾಯದ ಹಿರಿಯ ಕಾಂಗ್ರೆಸ್ ಮುಖಂಡರಾದ ದಿವಂಗತ ಎ.ಕೃಷ್ಣಪ್ಪ ಅವರ ಪುತ್ರಿ ಪೂರ್ಣಿಮಾ ಕೃಷ್ಣಪ್ಪ ಮತ್ತು ಕೃಷ್ಣಪ್ಪ ಅವರ ಅಳಿಯ ಶ್ರೀನಿವಾಸ್, ಕೆ.ನರಸಿಂಹನಾಯಕ್ ಸೇರಿದಂತೆ 750 ಕ್ಕೂ ಹೆಚ್ಚು ಬಿಜೆಪಿಯ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದರು.

ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ನಮ್ಮ ಕಾಂಗ್ರೆಸ್ . ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಧ್ವನಿಯಾಗಿ ಎ.ಕೃಷ್ಣಪ್ಪ, ಪೂರ್ಣಿಮಾ ಮತ್ತು ಶ್ರೀನಿವಾಸ್ ಮೊದಲಿನಿಂದಲೂ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಬಿಜೆಪಿ ಜಾತಿ ತಾರತಮ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಎಲ್ಲಾ ಜಾತಿಯ ಬಡವರು ಮತ್ತು ಶೂದ್ರ ಸಮುದಾಯದವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡು ರಾಜಕೀಯ ನಿಲುವು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.

ಚನ್ನಗಿರಿ ಶಾಸಕರೇ, ನಿಮಗೆ ಮತ ಹಾಕಿ ಜೂಜಾಟ ಆಡಲು ಬಿಟ್ಟಿಲ್ಲ: ಹೊದಿಗೆರೆ ರಮೇಶ್ ಆರೋಪ

ಪೂರ್ಣಿಮಾ, ಶ್ರೀನಿವಾಸ್ ಮತ್ತು ಇವರ ಬೆಂಬಲಿಗರಿಗೆ ಬಿಜೆಪಿ ಯಲ್ಲಿ ಸಾಮಾಜಿಕ ನ್ಯಾಯ ಇಲ್ಲ ಎನ್ನುವುದು ಸ್ಪಷ್ಟವಾಗಿ ಮನದಟ್ಟಾಗಿದೆ. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯದ ಪರವಾಗಿ ನಿಲುವು ಇಟ್ಟುಕೊಂಡಿರುವವರಿಗೆ ಬಹಳ ಕಷ್ಟ ಎನ್ನುವುದು ಇವರನ್ನು ನೋಡಿದಾಗ ಸ್ಪಷ್ಟವಾಗಿದೆ ಎಂದರು. ಅದಕ್ಕೇ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಹಿಂದುಳಿದ ಸಮುದಾಯಗಳು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಸಚಿವ ಡಿ.ಸುಧಾಕರ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿದಂತೆ ಗೊಲ್ಲ ಸಮುದಾಯದ ರಾಜ್ಯ ಮುಖಂಡರೂ , ವಿಧಾನ‌ ಪರಿಷತ್ ಸದಸ್ಯರೂ ಆದ ನಾಗರಾಜ ಯಾದವ್ ಸೇರಿದಂತೆ ಹಲವು ಮಂದಿ ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳ ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಳ್ಳೇ ಬಿಜೆಪಿಯ ಮನೆ ದೇವರು

ಸುಳ್ಳು ಬಿಜೆಪಿಯ ಮನೆ ದೇವರು. ಸುಳ್ಳುಗಳ ಮೂಲಕ ಜನರನ್ನು ಯಾಮಾರಿಸಿ, ದಿಕ್ಕು ತಪ್ಪಿಸಿ, ಹಾದಿ ತಪ್ಪಿಸಿ ಕೆಟ್ಟ ರಾಜಕಾರಣ ಮಾಡುತ್ತದೆ. ಅಧಿಕಾರಿ ಇದ್ದಾಗಲೂ ಸುಳ್ಳು, ಅಧಿಕಾರ ಇಲ್ಲದಿದ್ದಾಗಲೂ ಸುಳ್ಳುಗಳ ಮೇಲೆ ಅವಲಂಬನೆಯಾಗಿರುತ್ತದೆ. ನಿಮ್ಮ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ನಿಮ್ಮನ್ನೇ ಯಾಮಾರಿಸುವವರನ್ನು ಈ ಕ್ಷಣದಿಂದಲೇ ತಿರಸ್ಕರಿಸಿ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

Leave a Reply

Your email address will not be published. Required fields are marked *

error: Content is protected !!