ನಾಳೆಯೇ ರಾಜ್ಯದ ಸಿಎಂ ಆಗಿ ಸಿದ್ಧರಾಮಯ್ಯ ಪ್ರಮಾಣ ವಚನ ಸ್ವೀಕಾರ: ಕಾರ್ಯಕ್ರಮಕ್ಕೆ ಸಿದ್ಧತೆ.

ನಾಳೆಯೇ ರಾಜ್ಯದ ಸಿಎಂ ಆಗಿ ಸಿದ್ಧರಾಮಯ್ಯ ಪ್ರಮಾಣ ವಚನ ಸ್ವೀಕಾರ: ಕಾರ್ಯಕ್ರಮಕ್ಕೆ ಸಿದ್ಧತೆ.

ಬೆಂಗಳೂರು :ರಾಜ್ಯದ ಮುಖ್ಯಮಂತ್ರಿ ಸ್ಥಾನ ಸಿದ್ಧರಾಮಯ್ಯಗೆ ಖಚಿತವಾಗಿದ್ದು ಕಾಂಗ್ರೆಸ್ ಹೈಕಮಾಂಡ್ ನಿಂದ ಈ ಬಗ್ಗೆ ಅಧಿಕೃತ ಘೋಷಣೆಯೊಂದೆ ಬಾಕಿ ಇದೆ.

ಈ ಮಧ್ಯೆ ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್ ಕಸರತ್ತು ಮುಂದುವರೆದಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸುತ್ತಿದ್ದಾರೆ. ಹಾಗೆಯೇ ಸಿದ್ಧರಾಮಯ್ಯ ನಾಳೆಯೇ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಾಳೆ ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಭರದ ಸಿದ್ಧತೆಗಳು ನಡೆಯುತ್ತಿವೆ. ಅಧಿಕಾರಿಗಳು, ಪೊಲೀಸರು ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ 50,000 ಜನರಿಗೆ ವ್ಯವಸ್ಥೆ ಮಾಡಿದ್ದು, ಗಣ್ಯರು, ಶಾಸಕರು, ಸಾರ್ವಜನಿಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗುತ್ತಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!