siddaramaiah; ಚುನಾವಣೆ ಹತ್ತಿರ ಬರುತ್ತಿರುವುದರಿಂದ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ

ಮಧುಗಿರಿ, ಸೆ.06: ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂಥ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ತಿಳಿಸಿದರು.

ಅವರು ಇಂದು ಮಧುಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದೇಶದ ಸಂವಿಧಾನವನ್ನು 26 ನೇ ನವೆಂಬರ್ 1949 ರಂದು ಅಂಗೀಕಾರ ಮಾಡಿದ್ದಾರೆ. ಅಂದಿನಿಂದ ಭಾರತವನ್ನು ಇಂಡಿಯಾ ಎಂದೇ ಕರೆಯಲಾಗಿದೆ. ಈಗ ಬದಲಾವಣೆ ಮಾಡುವ ಅಗತ್ಯವೇನು ಎಂದರು.

Bhadra Dam; ಎಡದಂಡೆ ಕಾಲುವೆ ಇಂದಿನಿಂದಲೇ ನೀರು ಹರಿವು ಸ್ಥಗಿತ

ಸಂವಿಧಾನದ ಪೀಠಿಕೆಯಲ್ಲಿಯೂ ಭಾರತದ ಪ್ರಜೆಗಳಾದ ನಾವು ಎಂದೇ ಹೇಳಿದ್ದೇವೆ ಈಗ ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು.

ಗೃಹ ಸಚಿವ ಡಾ: ಜಿ.ಪರಮೇಶ್ವರ್ ಅವರು ಹಿಂದೂ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಯಾವುದೇ ಧರ್ಮದಲ್ಲಿ ತಾರತಮ್ಯ ಮಾಡುವುದಿಲ್ಲ. ಹಿಂದೂ, ಇಸ್ಲಾಮ್, ಕ್ರೈಸ್ತ, ಸಿಖ್, ಭೌದ್ಧ,ಧರ್ಮದಲ್ಲಿ ದಯವೇ ಧರ್ಮದ ಮೂಲವಯ್ಯ ಎಂದಿದ್ದಾರೆ ಎಂದರು.

Leave a Reply

Your email address will not be published. Required fields are marked *

error: Content is protected !!