ಕಿವಿ ಮೇಲೆ ಹೂ ಇಟ್ಟುಕೊಂಡು ಬಂದ ಸಿದ್ದರಾಮಯ್ಯ.! ಸದನದಲ್ಲಿ ಕೋಲಾಹಲ

ಕಿವಿ ಮೇಲೆ ಹೂ ಹೆಡ್ಡಿಂಗ್ ನಲ್ಲಿ ಇಟ್ಟುಕೊಂಡು ಬಂದ

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವಾರು ಕಾಂಗ್ರೆಸ್‌ ಮುಖಂಡರು ಕಿವಿ ಮೇಲೆ ಕೇಸರಿ ಬಣ್ಣದ ಹೂವು ಇಟ್ಟುಕೊಂಡು ಬಂದ ಕಾರಣಕ್ಕಾಗಿ ಕಲಾಪದಲ್ಲಿ ಗದ್ದಲ ಉಂಟಾದ ಘಟನೆ ಶುಕ್ರವಾರ ನಡೆಯಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ 2ನೇ ಬಜೆಟ್‌ ಮಂಡಿಸುವಾಗ ಸಿದ್ದರಾಮಯ್ಯ ಕವಿ ಮೇಲೆ ಹೂ ಇಟ್ಟುಕೊಂಡು ಬಂದರು.

ಸಿದ್ಧರಾಮಯ್ಯ ಅವರು ಕಿವಿ ಮೇಲೆ ಹೂವು ಇಟ್ಟುಕೊಂಡು ಬಂದಿದ್ದಕ್ಕೆ ಸಚಿವ ಅಶೋಕ ಆಕ್ಷೇಪ ವ್ಯಕ್ತಪಡಿಸಿದರು.

ಅವರೊಂದಿಗೆ ಧ್ವನಿಗೂಡಿಸಿದ ಸಿಎಂ ಬೊಮ್ಮಾಯಿ ಅವರು, ಇಷ್ಟು ದಿನ ಅವರು ಜನರ ಕಿವಿ ಮೇಲೆ ಹೂವಿಟ್ಟಿದ್ಧಾರೆ. ಈಗ ಅವರೇ ಕಿವಿ ಮೇಲೆ ಹೂವು ಇಟ್ಟುಕೊಂಡಿದ್ದಾರೆ. ಮುಂದೆ ಜನ ಇವರ ಕಿವಿ ಮೇಲೆ ಹೂವಿಡುತ್ತಾರೆ ಎಂದರು.

ಇದರಿಂದ ಗರಂ ಆದ ಸಿದ್ದರಾಮಯ್ಯ, ನೀವು ಜನರ ಕಿವಿ ಮೇಲೆ ಹೂವಿಡುತ್ತಿದ್ದೀರಿ. ನಾನು ಹೂವು ಇಟ್ಟುಕೊಂಡಿದ್ದು, ಈ ಬಜೆಟ್‌ ಮೂಲಕ ಇವರು 7 ಕೋಟಿ ಜನರ ಕಿವಿ ಮೇಲೆ ಹೂ ಇಡುತ್ತಿದ್ದಾರೆ ಅಂತ ತಿಳಿಸಲು ಎಂದು ಅಸಮಾಧಾನ ಹೊರಹಾಕಿದರು.

ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ಮಧ್ಯಪ್ರವೇಶ ಮಾಡಿದ ಸಭಾಧ್ಯಕ್ಷ ಕಾಗೇರಿಯವರು, ಇಷ್ಟುದಿನ ಕೇಸರಿ ಬಣ್ಣ ನಿಮ್ಮ ಪಕ್ಷದ್ದು ಎನ್ನುತ್ತಿದ್ದ ಸಿದ್ದರಾಮಯ್ಯನವರೇ ಇಂದು ಕೇಸರಿ ಬಣ್ಣದ ಹೂ ಇಟ್ಟುಕೊಂಡು ಬಂದಿದ್ದಾರೆ ಎಂದರು.

ನಂತರ ಸದಸ್ಯರನ್ನು ಸಮಾಧಾನಪಡಿಸಿ ಬಜೆಟ್‌ ಮಂಡನೆಗೆ ಅವಕಾಶ ಕಲ್ಪಿಸಿದರು.

Leave a Reply

Your email address will not be published. Required fields are marked *

error: Content is protected !!