ಸಿಂದಗಿ ಜೆಡಿಎಸ್‌ ಅಭ್ಯರ್ಥಿ ಶಿವಾನಂದ ಸಾವು

ವಿಜಯಪುರ: ಶಿವಾನಂದ ಪಾಟೀಲ್ ಸೋಮಜ್ಯಾಳ (54) ಶುಕ್ರವಾರ ತಡ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ವಿಧಾನಸಭಾ ಚುನಾವಣೆಗೆ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅವರು, ಚುನಾವಣೆಗೆ ಸಾಕಷ್ಟು ತಯಾರಿ ನಡೆಸಿದ್ದರು ಎನ್ನಲಾಗಿತ್ತು.
ಪಕ್ಷದ ಕಾರ್ಯಕ್ರಮ ಮುಗಿಸಿಕೊಂಡು ರಾತ್ರಿ ಸಿಂದಗಿ ಪಟ್ಟಣಕ್ಕೆ ತೆರಳಿದ್ದರು. ತಡ ರಾತ್ರಿ‌ ಅಸ್ವಸ್ಥಗೊಂಡ ಶಿವಾನಂದ ಪಾಟೀಲ್ ಸೋಮಜ್ಯಾಳ ಅವರನ್ನು ಸಿಂದಗಿ ಪಟ್ಟಣದ ವಾತ್ಸಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೃದಯಾಘಾತದಿಂದ ಅವರು ಸಾವನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಜನವರಿ18ರಂದು ಸಿಂದಗಿಯಲ್ಲಿ  ಇವರ ನೇತೃತ್ವದಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ ಬೃಹತ್ ಪ್ರಮಾಣದಲ್ಲಿ ನಡೆದಿತ್ತು. ಜಿಲ್ಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪಂಚರತ್ನ ರಥಯಾತ್ರೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಶುಕ್ರವಾರ ವಿಜಯಪುರ ನಗರ ಮತ್ತು ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದ್ದ ಜೆಡಿಎಸ್ ಚುನಾವಣಾ ಪ್ರಚಾರ ಸಭೆ, ಸಮಾವೇಶದಲ್ಲಿ ಕುಮಾರಸ್ವಾಮಿ ಅವರೊಂದಿಗೆ ಪಾಲ್ಗೊಂಡಿದ್ದರು. ಅವರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ.

Leave a Reply

Your email address will not be published. Required fields are marked *

error: Content is protected !!