ಸ್ಮಾರ್ಟ್ ಸಿಟಿ ಅನುಷ್ಠಾನದಲ್ಲಿ ರಾಜ್ಯ ಆರನೇ ಸ್ಥಾನದಲ್ಲಿದೆ: ಮೊದಲ ಸ್ಥಾನಕ್ಕೆ ತರುವ ಪ್ರಯತ್ನ‌ ಮಾಡಿ: ಬೈರತಿ ಬಸವರಾಜ್ ಅಧಿಕಾರಿಗಳಿಗೆ ತಾಕೀತು

IMG-20210817-WA0009

 

ಬೆಂಗಳೂರು: ದೇಶದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ರಾಜ್ಯ 6ನೇ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ನಮ್ಮ ರಾಜ್ಯ ಮೊದಲ ಸ್ಥಾನ ಪಡೆಯಬೇಕು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಹೊರತುಪಡಿಸಿ ರಾಜ್ಯದ ಹತ್ತು ಮಹಾನಗರ ಪಾಲಿಕೆಗಳಲ್ಲಿ ನಡೆದಿರುವ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನ ಇಂದಿರಾನಗರದಲ್ಲಿರುವ ಕೆಯುಐಡಿಎಫ್ ಸಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದ ಮೈಸೂರು, ತುಮಕೂರು, ಶಿವಮೊಗ್ಗ, ಮಂಗಳೂರು, ದಾವಣಗೆರೆ, ಹುಬ್ಬಳ್ಳಿ ಧಾರವಾಡ, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಗಳ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ ಸಭೆಯಲ್ಲಿ ಆಯಾ ಪಾಲಿಕೆಗಳ ಆಯುಕ್ತರು ಭಾಗವಹಿಸಿದ್ದರು.

ಸಭೆಯಲ್ಲಿ 2019-20 ನೇ ಸಾಲಿನಲ್ಲಿ 700 ಕೋಟಿ ರೂಪಾಯಿಗಳು, 2020-21 ನೇ ಸಾಲಿನಲ್ಲಿ 1300 ಕೋಟಿ ರೂಪಾಯಿ ಮತ್ತು 2021-22 ನೇ ಸಾಲಿನಲ್ಲಿ ಇಲ್ಲಿಯವರೆಗೆ 537 ಕೋಟಿ ರೂಪಾಯಿಗಳನ್ನು ವಿವಿಧ ಯೋಜನೆಗಳ ಮೂಲಕ ಕಾಮಗಾರಿಗಳಿಗೆ ವೆಚ್ಚ ಮಾಡಲಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಆಮೆಗತಿಯಲ್ಲಿ ಕಾಮಗಾರಿಗಳನ್ನು ನಿರ್ವಹಿಸಿದೆ ತ್ವರಿತವಾಗಿ ಪೂರ್ಣಗೊಳಿಸಿ, ಸದ್ಯ ನಮ್ಮ ರಾಜ್ಯ ಸ್ಮಾರ್ಟ್ ಸಿಟಿ ಅನುಷ್ಠಾನದಲ್ಲಿ ಆರನೇ ಸ್ಥಾನದಲ್ಲಿದೆ. ಮೊದಲ ಸ್ಥಾನಕ್ಕೆ ತರುವ ಪ್ರಯತ್ನ‌ ಮಾಡಿ ಎಂದು‌ ತಾಕೀತು ಮಾಡಿದರು.

ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಎಂ.ಎನ್. ಅಜಯ್ ನಾಗಭೂಷಣ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಬಿ.ಬಿ.ಕಾವೇರಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಎಂ.ಟಿ.ರೇಜು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!