ಸೋಮವಾರದಿಂದ ಲಾಕ್‌ಡೌನ್ ನಲ್ಲಿ ಕ್ಯಾಟಗಿರಿ ಒಂದು ಜಿಲ್ಲೆಯ ವಿನಾಯತಿ ದಾವಣಗೆರೆಗೆ – ಡಿ.ಸಿ ಮಹಾಂತೇಶ್ ಭೀಳಗಿ ಆದೇಶ

ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.5 ರೊಳಗೆ ಬಂದಿರುವುದರಿಂದ ರಾಜ್ಯ ಸರ್ಕಾರ ದಾವಣಗೆರೆ ಜಿಲ್ಲೆಯನ್ನು ‘ಎ’ ವರ್ಗಕ್ಕೆ ಸೇರಿಸಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಧಿಕಾರಿ ಲಾಕ್‌ಡೌನ್ ಅಲ್ಲಿ ಮತ್ತಷ್ಟು ರಿಯಾಯಿತಿಯನ್ನು ಸೇರ್ಪಡೆಮಾಡಿ ಆದೇಶ ಹೊರಡಿಸಿದ್ದಾರೆ. ಅದರಂತೆ ಎಲ್ಲ ಅಂಗಡಿಗಳು ಹಾಗೂ ಹೋಟೆಲ್‌ಗಳು ಜು.5 ರವರೆಗೆ ಅನ್ವಯವಾಗುವಂತೆ ಬೆಳಿಗ್ಗೆ 6 ರಿಂದ ಸಂಜೆ 5 ಗಂಟೆಯವರೆಗೆ ವಹಿವಾಟು ನಡೆಸಬಹುದು. ಆದರೆ, ಹವಾನಿಯಂತ್ರಿತ ಶಾಪಿಂಗ್ ಕಾಂಪ್ಲೆಕ್ಸ್, ಮಾಲ್‌ಗಳಿಗೆ ಅನುಮತಿ ನಿಂಡಿಲ್ಲ.

ಜುಲೈ 5 ರ ಬೆಳಿಗ್ಗೆ 5 ಗಂಟೆಯವರೆಗೆ ಲಾಕ್‌ಡೌನ್ ಮುಂದುವರೆಯಲಿದ್ದು ಕೋವಿಡ್-19 ರ ಮಾರ್ಗಸೂಚಿಗಳ ಪಾಲನೆಯ ಷರತ್ತಿಗೆ ಒಳಪಟ್ಟು ಬಸ್‌ಗಳ ಆಸನದ ಗರಿಷ್ಠ ಶೇ.50 ರ ಸಾಮರ್ಥ್ಯದೊಂದಿಗೆ ಬಸ್ ಸಂಚಾರಕ್ಕೆ ಅನುಮತಿಸಿದೆ. ಪ್ರಯಾಣಿಕರು ಬಸ್‌ಗಳಲ್ಲಿ ನಿಂತು ಪ್ರಯಾಣಿಸಲು ಅವಕಾಶವಿರುವುದಿಲ್ಲ.

ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಆದರೆ, ಸರಕು ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಅವಕಾಶವಿರುವ ಹಿನ್ನೆಲೆಯಲ್ಲಿ ವಾಹನಗಳು ಸರಕುಗಳನ್ನು ರಶೀದಿಯಲ್ಲಿ ನಮೂಧಿತ ವಿಳಾಸದ ಅಂಗಡಿ ಮತ್ತು ಗೋದಾಮುಗಳಲ್ಲಿ ಇಳಿಸಲು ಮತ್ತು ತೆಗೆದುಕೊಂಡು ಹೋಗಲು ಮಾತ್ರ ದಿನಪೂರ್ತಿ ಅವಕಾಶ ನೀಡಲಾಗಿದೆ.

ಎಲ್ಲಾ ವಿಧದ ಉತ್ಪಾದಿತ ಘಟಕಗಳು ,ಸಂಸ್ಥೆಗಳು, ಕೈಗಾರಿಕೆಗಳು, ಕೋವಿಡ್ ನಿಯಮಾವಳಿಯ ಮೇಲೆ ಶೇ.50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು. ಹಾಗೂ ಗಾರ್ಮೆಂಟ್ಸ್ ಗಳಲ್ಲಿ ಶೇ.30 ರ ಸಿಬ್ಬಂದಿ ಯೊಂದಿಗೆ ಕೋವಿಡ್ ಕ್ರಮವನ್ನು ಅನುಸರಿಸಿ ಕಾರ್ಯನಿರ್ವಹಿಸಬಹುದಾಗಿದೆ.

ಸಾರ್ವಜನಿಕರು ಹೊರಗಡೆ ಓಡಾಡುವುದನ್ನು ನಿಯಂತ್ರಿಸುವುದಕ್ಕಾಗಿ ಕೋವಿಡ್-19 ನಿರ್ವಹಣೆಯ ಕಾರ್ಯಾಚರಣೆಗಳನ್ನು ರಾಷ್ಟೀಯ ನಿರ್ದೇಶನಗಳಿಗೆ ಒಳಪಟ್ಟು ಎಲ್ಲಾ ಅವಶ್ಯಕ ವಸ್ತುಗಳನ್ನು ಮನೆ ಮನೆಗೆ 24*7 ಅವಧಿಯಲ್ಲಿ ಪೂರೈಸಲು ಅನುಮತಿಸಲಾಗಿದೆ.

ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಬಾರ್ ಹಾಗೂ ಕ್ಲಬ್‌ಗಳು ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಶೇ.50 ರ ಸಾಮರ್ಥ್ಯದಲ್ಲಿ ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ಸಲ್ಲಿಸಲು ಅನುಮತಿ ನೀಡಲಾಗಿದೆ. ಆದರೆ, ಊಟದ ಜೊತೆಗೆ ಮದ್ಯವನ್ನು ಪೂರೈಸುವಂತಿಲ್ಲ. ಹವಾನಿಯಂತ್ರಿತ ಹೋಟೆಲ್ ಇತ್ಯಾದಿಗಳು ಕಾರ್ಯನಿರ್ವಹಿಸುವಂತಿಲ್ಲ.

ಲಾಡ್ಜ್, ರೆಸಾರ್ಟ್ ಇತ್ಯಾದಿಗಳು ಶೇ.50 ರ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಪ್ರೇಕ್ಷಕರ ರಹಿತವಾಗಿ ಎಲ್ಲಾ ಹೊರಾಂಗಣ ಕ್ರೀಡಾ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.

ಆರೋಗ್ಯ ಕ್ಷೇತ್ರದ ಕೌಶಲ್ಯ ತರಬೇತಿ ಹಾಗೂ ಘನತ್ಯಾಜ್ಯ ನಿರ್ವಹಣೆ ಸಂಬಂಧಿತ ತರಬೇತಿಗೆ ಅವಕಾಶ. ಗರಿಷ್ಠ ಇಬ್ಬರು ಪ್ರಯಾಣಿಕರ ಸಾಮರ್ಥ್ಯದೊಂದಿಗೆ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಸಂಚರಿಸಲು ಅನುಮತಿಸಿದೆ. ವಾಕಿಂಗ್ ಮತ್ತು ಜಾಗಿಂಗ್ ಉದ್ದೇಶಕ್ಕಾಗಿ ಮಾತ್ರ ಉದ್ಯಾನವನಗಳನ್ನು ಬೆಳಿಗ್ಗೆ 5 ರಿಂದ ಸಂಜೆ 6 ರವರೆಗೆ ಮಾತ್ರ ತೆರೆಯಲು ಅನುಮತಿಸಿದೆ. ಆದರೆ, ಯಾವುದೇ ಗುಂಪು ಚಟುವಟಿಕೆಗಳಿಗೆ ಅವಕಾಶವಿಲ್ಲ.

ಎಲ್ಲ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಇಗೆ ಸಿಬ್ಬಂದಿಯ ಶೇ.50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಆರೋಗ್ಯ ವಲಯಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿಗಳಿಗೆ ಅನುಮತಿಸಿದೆ. ಕೋವಿಡ್-19 ಮಾರ್ಗಸೂಚಿಯನ್ವಯ ಹೊರಾಂಗಣ ಚಿತ್ರಿಕರಣಕ್ಕೆ ಹಾಗೂ ಸೀರಿಯಲ್‌ಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಶನಿವಾರ ಮತ್ತು ಭಾನುವಾರ ವಾರಂತ್ಯದ ಕರ್ಫ್ಯೂ ಇರುವುದರಿಂದ ಸೋಮವಾರದಿಂದ ವಿನಾಯಿತಿಗಳು ದೊರೆಯಲಿವೆ. ವಾರಂತ್ಯದ ಕಫ್ಯೂ ಅವಧಿಯಲ್ಲಿ ಆಹಾರ, ದಿನಸಿ, ಹಣ್ಣು, ತರಕಾರಿ, ಮಾಂಸ, ಮೀನು, ಹಾಲು, ಕಾಲಿನ ಬೂತ್‌ಗಳು ಮತ್ತು ಜಾನುವಾರು ಮೇವಿನ ಅಂಗಡಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಕಾರ್ಯ ನಿರ್ವಹಿಸಬಹುದು. ಮದ್ಯದ ಅಂಗಡಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಪಾರ್ಸೆಲ್ ನೀಡಬಹುದು.

ತುರ್ತು ಹಾಗೂ ಅಗತ್ಯ ಸೇವೆಗಳಿಗೆ ಹಿಂದಿನಂತೆಯೇ ಅನುಮತಿ ಇದೆ. ಬಸ್, ರೈಲು ಹಾಗೂ ವಿಮಾನಯಾನಗಳಿಗೆ ಅನುಮತಿ ಇದೆ. ನಿಗದಿಯಾದ ಮದುವೆಗಳು ಹಾಗೂ ಅಂತ್ಯಕ್ರಿಯೆಗಳಿಗೆ ನಿರ್ಬಂಧಿತ ಅನುಮತಿ ಇದೆ.

ಈ ಮೇಲೆ ತಿಳಿಸಿದ ಮಾರ್ಗಸೂಚಿ ಅಥವಾ ನಿಬಂಧನೆಗಳನ್ನು ಉಲ್ಲಂಘಿಸಿದ ಪಕ್ಷದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.

Leave a Reply

Your email address will not be published. Required fields are marked *

error: Content is protected !!