ದಾವಣಗೆರೆ : ಕೆಲ ಕಾಂಗ್ರೆಸ್ ಮಂತ್ರಿಗಳು ಜೋಕರ್ ರೀತಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.ದಾವಣಗೆರೆ ರೇಣುಕಾಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸತೀಶ್ ಜಾರಕಿ ಹೊಳಿ ಬೆಸ್ಕಾಂ ಸರ್ವರ್ ಹ್ಯಾಕ್ ಆಗಿದೆ ಎಂದು ಹೇಳಿದ್ದಾರೆ. ಅಲ್ಲದೇ ಸರ್ವರ್ ಹ್ಯಾಕ್ ಆದರೆ ಅದನ್ನು ಬಿಜೆಪಿಯವರು ಮಾಡಿಸಿದ್ದಾರೆ ಎನ್ನುತ್ತಾರೆ. ಆದರೆ ಈ ರಾಜ್ಯದಲ್ಲಿ ಪ್ರಜ್ಞಾವಂತ ಮತದಾರರಿದ್ದಾರೆ. ಎಲ್ಲವನ್ನೂ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ಈ ರಾಜ್ಯದ ಜನರನ್ನು ಗ್ಯಾರಂಟಿಗಳ ಮೂಲಕ ವಂಚನೆ ಮಾಡಿದೆ. ಆದರೆ ಇಡೀ ವಿಶ್ವ ಭಾರತದ ಆರ್ಥಿಕ ಮಾರ್ಗದರ್ಶನಕ್ಕಾಗಿ ಕಾಯುತ್ತಿದೆ. ಕೇಂದ್ರದಲ್ಲಿ ವಿರೋಧಪಕ್ಷಗಳು ಅಭಿವೃದ್ಧಿಯನ್ನು ಸೋಲಿಸುವ ಪ್ರಯತ್ನ ಮಾಡುತ್ತಿವೆ,
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 1 ತಿಂಗಳಲ್ಲಿಯೇ ಪ್ರತಿಭಟನೆಗಳು ನಡೆಯುತ್ತಿವೆ. ಈ ಬಾರಿಯ ಚುನಾಣೆಯಲ್ಲಿ ಕಾಂಗ್ರೆಸ್ ನಾಯಕರು 60 ವರ್ಷದ ಕಾಂಗ್ರೆಸ್ ಸಾಧನೆ ಮುಂದಿಟ್ಟುಕೊಂಡು ಮತ ಕೇಳಲಿಲ್ಲ. ಬದಲಿಗೆ 5 ಗ್ಯಾರಂಟಿಗಳ ಆಧಾರದ ಮೇಲೆ ಅನಿರೀಕ್ಷಿತವಾಗಿ ಅಧಿಕಾರಕ್ಕೆ ಬಂತು. ಈ 5 ಗ್ಯಾರಂಟಿಗಳನ್ನು ಈಡೇರಿಸದೇ ಹೋದರಲ್ಲಿ ಬಿಜೆಪಿ ಹೋರಾಟ ನಿಲ್ಲುವುದಿಲ್ಲ ಎಂದರು.ಮುಂದೆ ಲೋಕಸಭೆ ಚುನಾವಣೆ ಬರಲಿದ್ದುಘಿ, ಕಾರ್ಯಕರ್ತರ ಬಲ ಬೇಕಿದೆ..ಬಿಜೆಪಿ ನನಗೆ ಸಾಕಷ್ಟು ಮಾಡಿದೆ. ಒಬ್ಬ ಚಮ್ಮಾರನಾದ ನನ್ನನ್ನು ಕೇಂದ್ರ ಸಚಿವನ್ನಾಗಿ ಮಾಡಿದೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಬರಲಿದ್ದುಘಿ, ಮುಂದಿನ ದಿನಗಳಲ್ಲಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದರು.
ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಚುನಾವಣಾ ಸಂದರ್ಭದಲ್ಲಿ ನೀಡಿರುವ ’ಗ್ಯಾರಂಟಿ’ ಹೇಳಿಕೆಗಳು ಎಲ್ಲರ ಬಳಿಯೂ ಇದೆ ಎಂದ ಸಚಿವ ಎ.ನಾರಾಯಣ ಸ್ವಾಮಿ, ಗ್ಯಾರಂಟಿ ಕಾರ್ಡ್ ಗಾಗಿ ಐದು ವರ್ಷದ ಸರ್ಕಾರ ಎಂಬ ಚಿಂತನೆ ನಡೆದಿದೆ. ಕಾಂಗ್ರೆಸ್ ಪಕ್ಷದಿಂದ ಪ್ರಜಾಪ್ರಭುತ್ವಕ್ಕೆ ಮಸಿ ಬಳಿಯುವ ಕೆಲಸ ನಡೆದಿದೆ ಎಂದು ಆರೋಪಿಸಿದ ಸಚಿವ ಎ.ನಾರಾಯಣ ಸ್ವಾಮಿ, ಸಿದ್ಧಾಂತದಿಂದ ಗೆದ್ದಿದ್ದೀವಿ ಎಂದು ಹೇಳುವ ಎದೆಗಾರಿಕೆ ಕಾಂಗ್ರೆಸ್ ನಾಯಕರಿಗಿಲ್ಲ. ಗ್ಯಾರಂಟಿ ಕಾರ್ಡ್ ಮೂಲಕ ಕಾಂಗ್ರೆಸ್ ಗೆಲುವು ಸಾಧಿಸಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಕಳೆದ 15 ದಿನಗಳಿಂದ ಗ್ಯಾರಂಟಿ ಕಾರ್ಡ್ ಗಳ ಬಗ್ಗೆಯೇ ಚರ್ಚೆ ನಡೆಯುತ್ತಿದೆ ಎಂದರು ಹೇಳಿದರು.
