ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಮುಂದುವರಿಕೆ

ನವದೆಹಲಿ: ಸೋನಿಯಾ ಗಾಂಧಿ ಅವರೇ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ನಿರ್ಧರಿಸುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆಯಲಾಗಿದೆ. ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಸುದ್ದಿಗಳು ಗರಿಗೆದರಿದ್ದವು. ಪಂಚರಾಜ್ಯ ಚುನಾವಣೆಯ ಸೋಲಿನ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ಸಿದ್ಧರಿರುವುದಾಗಿ ಸೋನಿಯಾ ಅವರು ತಿಳಿಸಿದ್ದರು. ಆದರೆ ಕಾರ್ಯಕಾರಣಿ (ಸಿಡಬ್ಲುಸಿ) ಅದನ್ನು ಒಪ್ಪಿಕೊಳ್ಳಲಿಲ್ಲ ಎಂದು ಮೂಲಗಳು ತಿಳಿಸಿವೆ.

ಪಕ್ಷದ ಆಂತರಿಕ ಚುನಾವಣೆ ನಡೆಯುವವರೆಗೆ ಅಧ್ಯಕ್ಷರಾಗಿ ಮುಂದುವರೆಯುವAತೆ ಸಿಡಬ್ಲು÷್ಯಸಿ ನಾಯಕರು ಸೋನಿಯಾ ಅವರಿಗೆ ಮನವಿ ಮಾಡಿದ್ದಾರೆ. ಸೋನಿಯಾ ನಾಯಕತ್ವದಲ್ಲಿ ನಮಗೆಲ್ಲರಿಗೂ ನಂಬಿಕೆಯಿದೆ ಎಂದು ಮುಖಂಡರು ತಿಳಿಸಿದ್ದಾರೆ. ಸೋನಿಯಾ ಗಾಂಧಿ ಅವರ ಜತೆ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಕೆಸಿ ವೇಣುಗೋಪಾಲ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಪಿ ಚಿದಂಬರ  ಸಿಡಬ್ಲೂ÷್ಯಸಿ ಸಭೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!