ಪೊಲೀಸ್ ಇಲಾಖೆಯಲ್ಲಿ ವಯೋ ನಿವೃತ್ತಿ ಹೊಂದಿದ ಅಧಿಕಾರಿಗಳಿಗೆ ಸನ್ಮಾನಿಸಿದ ಎಸ್ ಪಿ ರಿಷ್ಯಂತ್

ದಾವಣಗೆರೆ: ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಾದ ಅಜಾದ್ ನಗರ ಠಾಣೆ ಪಿಎಸ್ಐ ಆಗಿ ಕರ್ತವ್ಯನಿರ್ವಹಿಸುತ್ತಿದ್ದ ಓಬಳೇಶ್ ನಾಯಕ್ ಹಾಗೂ ಕೆಟಿಜೆ ನಗರ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೇವೆಂದ್ರಪ್ಪ ಅವರನ್ನು ಪೊಲೀಸ್ ಅಧೀಕ್ಷಕರವರಾದ ಸಿ.ಬಿ.ರಿಷ್ಯಂತ್ ಅವರು ಇಂದು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅಭಿನಂದಿಸಿ ಸನ್ಮಾನಿಸಿದರು. ಈ ವೇಳೆ ನಿವೃತ್ತಿ ಜೀವನಕ್ಕೆ ಶುಭ ಕೋರಿದರು.